SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 14, 2024 shimoga inforamtaion
ಅಂಗನವಾಡಿ ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಮೋಸ ಹೋಗದಿರಿ ಅಂತಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-Department of Women and Child Development
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.
ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ https://chat.whatsapp.com/FxYXrxP9Vbq6Xd5jML5sQN
TODAY ವಾಟ್ಸ್ಯಾಪ್ ಚಾನಲ್ ಫಾಲೋ ಮಾಡಿ https://whatsapp.com/channel/0029Va9I91s3LdQVrdq7yl1h
ಗೂಗಲ್ ನ್ಯೂಸ್ ಜಸ್ಟ್ ಫಾಲೋಕೊಡಿ https://news.google.com/publications/CAAqBwgKMLWipQwwx5q0BA?ceid=IN:en&oc=3