ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಂಪುಟ ಅನುಮೋದನೆ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 12, 2024

ಕೇಂದ್ರ ಸಚಿವ ಸಂಪುಟ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿದೆ. ಚಳಿಗಾಲದ ಅದಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಅಧಿವೇಶನದಲ್ಲಿ ‘One Nation, One Election’ ಬಿಲ್ ಮಂಡಿಸಿ ಅಂಗೀಕಾರ ಪಡೆಯುವ ಲೆಕ್ಕಾಚಾರದಲ್ಲಿ ಕೇಂದ್ರ ಸರ್ಕಾರ ಇದೆ.

ಕಳೆದ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಷಯವನ್ನು ಪ್ರಸ್ತಾಪಿಸಿತ್ತು, ಹಾಗೆಯೇ ಈ ರೀತಿ ಚುನಾವಣೆಯನ್ನು ನಡೆಸುವುದರಿಂದ ಚುನಾವಣಾ ವೆಚ್ಚವನ್ನು ತಗ್ಗಿಸಬಹುದದು ಎಂದು ಪ್ರತಿಪಾದಿಸಿತ್ತು. ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.

ಬುಧವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಒಂದು ರಾಷ್ಟ್ರ, ಒಂದು ಚುನಾವಣೆ ಕಾಯ್ದೆ ತರುವ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ್ದರು. ಪದೇ ಪದೇ ನಡೆಯುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದರು. ಈ ನಡುವೆ  ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ಚುನಾವಣೆ ನಡೆಸುವ ಕಾಯ್ದೆಗೆ ಕಾಂಗ್ರೆಸ್ ಮತ್ತು ಎಎಪಿಯಂತಹ ಪಕ್ಷಗಳು ವಿರೋಧ ವ್ಯಕ್ತಪಡಿಸಿದರೆ ಬಿಜೆಪಿಯ ಮಿತ್ರ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಗೆ ಬೆಂಬಲ ವ್ಯಕ್ತಪಡಿಸಿವೆ

SUMMARY | The Union Cabinet has approved one nation, one election. The bill is likely to be introduced in the winter session.


KEYWORDS | Union Cabinet,  one nation one election, politicalnews,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor