SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 24, 2025
ಕತ್ತು ಸೀಳಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಭದ್ರಾವತಿ ತಾಲೂಕಿನ ಕಲ್ಲಿಹಾಳು ಸಮೀಪದ ಬೊಮ್ಮನಕಟ್ಟೆ ಗ್ರಾಮದಲ್ಲಿ ಪತ್ತೆಯಾಗಿದೆ.
ಶ್ರೀನಿವಾಸ (28) ಮೃತ ಪಟ್ಟಿರುವ ಯುವಕ ಎಂದು ತಿಳಿದುಬಂದಿದೆ. ಬೊಮ್ಮನ ಕಟ್ಟೆಯ ಶ್ರೀನಿವಾಸ್ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ, ಆತ ವಿಪರೀತ ಕುಡಿತದ ಚಟಕ್ಕೆ ಒಳಗಾಗಿದ್ದು,ಸ್ಥಳೀಯರ ಮಾಹಿತಿಯ ಪ್ರಕಾರ ಶ್ರೀನಿವಾಸ್ ಅಧಿಕ ಕುಡಿತದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಆತನಿಗೆ 7 ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳು ಇದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
SUMMARY |The body of a man was found with his throat slit at Bommanakatte village near Kallihal in Bhadravathi taluk.
KEYWORDS | Bommanakatte, Bhadravathi, body of a man,