ಕರ್ನಾಟಕ ಯೂತ್‌ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 12, 2025 ‌‌ 

ಶಿವಮೊಗ್ಗ ಜಿಲ್ಲಾ ಯೂತ್‌ ಕಾಂಗ್ರೆಸ್‌ ಅಧ್ಯಕ್ಷನಾಗಿ ಹರ್ಷಿತ್‌ ಗೌಡ ಆಯ್ಕೆಯಾದ ಬೆನ್ನಲ್ಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮೊಟ್ಟಮೊದಲ ಬಾರಿಗೆ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ ಎಂ ಆಯ್ಕೆಯಾಗಿದ್ದಾರೆ. 

ಈ ಸ್ಥಾನಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನಲ್ಲಿ ನಡೆದ ಆಂತರಿಕ ಚುನಾವಣೆಯಲ್ಲಿ ಸೋನಿಯಾ 15 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಮೊದಲೂ ಸೋನಿಯಾ ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. 

ಮಹಿಳಾ ಕೋಟಾದಡಿ ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯಿಂದ ಏಕೈಕ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎನಿಸಿದ್ದಾರೆ ಸೋನಿಯಾ 

SUMMARY  | Sonia M elected as women state general secretary in Karnataka State Youth Congress

KEY WORDS | Sonia M ,  state general secretary , Karnataka State Youth Congress

Share This Article