SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 20, 2024
ಬೆಂಗಳೂರು | ಸಿ ಎಂ ಸಿದ್ದರಾಮಯ್ಯನವರೆ ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್ ಸದಸ್ಯನಿಗೆ ನಿಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದ ಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು ಎಂದು ಕಾಂಗ್ರೆಸ್ ಸರ್ಕಾರ ವಿರುದ್ದ ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಪರಿಷತ್ ಸದಸ್ಯ ಸಿ.ಟಿ ರವಿಯವರ ಮೇಲೆ ನಡೆದ ಹಲ್ಲೆಯನ್ನ ವಿರೋಧಿಸಿ ಆರ್ ಅಶೋಕ್ ತಮ್ಮ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಹಾಕುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳು ಯಾವುದೇ ಕಾನೂನು ಕ್ರಮವಿಲ್ಲದೆ ಹೊರಗಿದ್ದಾರೆ. ಆ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು, ಸುದ್ದಿ ಬಿತ್ತರಿಸಿದ ಮಾಧ್ಯಮಗಳ ಮೇಲೆ ಹೌಹಾರಿದವರು ಇನ್ನೂ ರಾಜಾರೋಷವಾಗಿ ಮಂತ್ರಿಗಳಾಗಿ ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ.
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (ಎಸ್ಡಿಎ) ರುದ್ರೇಶ್ ಯಾದವಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ವಿರುದ್ಧ ದೂರಿದೆ. ಆ ತನಿಖೆ ಎಲ್ಲಿವರೆಗೆ ಬಂತು. ಎಷ್ಟು ಜನರ ಬಂಧನವಾಗಿದೆ ಎಂದು ಪ್ರಶ್ನಿಸಿದ್ದಾರೆ.
SUMMARY | Cm Siddaramaiah, if your government is not able to provide protection to a council member who has been arrested and is in police custody, then your government must have been hijacked by rowdies and goons
KEYWORDS | Cm Siddaramaiah, r ashok, bjp, congress,