SHIVAMOGGA | MALENADUTODAY NEWS | ಮಲೆನಾಡು ಟುಡೆ Dec 27, 2024
ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಕುವೆಂಪು ವಿವಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ರದ್ದಾಗಿವೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ 27 ರಂದು ಅಂದರೆ ಇವತ್ತು ಶುಕ್ರವಾರದಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಹೊಸನಗರ ಹಾಗೂ ಭದ್ರಾವತಿ ತಾಲ್ಲೂಕುಗಳಲ್ಲಿ ಲೋಕಾಯುಕ್ತ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆಯನ್ನು ಮುಂದೂಡಲಾಗಿದೆ. ಹೊಸನಗರ ಹಾಗೂ ಭದ್ರಾವತಿ ತಾಲ್ಲೂಕುಗಳ ಸಾರ್ವಜನಿಕ ಕುಂದು ಕೊರತೆ, ಅರ್ಜಿ ಸ್ವೀಕಾರ ಸಭೆಯನ್ನು ದಿನಾಂಕ: 30-12-2024 ರಂದು ಮರುನಿಗದಿ ಪಡಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
SUMMARY | examination scheduled to be held at Kuvempu University in Shivamogga has been postponed in the wake of the death of former Prime Minister Manmohan Singh The public grievance meeting scheduled to be held by the Lokayukta Department in Hosanagar and Bhadravati has been postponed.
KEY WORDS | examination postponed , Kuvempu University , Shivamogga, former Prime Minister Manmohan Singh , public grievance meeting, Lokayukta Department in Hosanagar, Bhadravati