Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIMOGA NEWS LIVE

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗೆ ಶಿವಮೊಗ್ಗದ ಎರಡು ಗ್ರಾಮ ಆಯ್ಕೆ | ಹಳ್ಳಿಗೆ ಹೈಟೆಕ್‌ ಸೌಲಭ್ಯ!

13
Last updated: September 23, 2024 9:26 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 23, 2024 Shivamogga power Cut

2024-25ನೇ ಸಾಲಿನ ಆರ್ಥಿಕ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವಂತೆ ದೇಶದಾದ್ಯಂತ ಬಹುಸಂಖ್ಯಾತ ಬುಡಕಟ್ಟು ಸಮುದಾಯದ 63,000 ಗ್ರಾಮಗಳನ್ನು ಹಾಗೂ 5.00 ಕೋಟಿ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಮಗ್ರ ಅಭಿವೃದ್ಧಿಯ ಗುರಿ ಹೊಂದಿರುವ ಪಿಎಂ ಜನಮನ್ ಯೋಜನೆಯಿಂದ ಸ್ಫೂರ್ತಿ ಪಡೆದ ಯೋಜನೆ ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

2024-25ನೇ ಸಾಲಿನಿಂದ 2028-29ನೇ ಸಾಲಿನ 5 ವರ್ಷಗಳ ಈ ಅಭಿಯಾನಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ ನೋಡಲ್ ಸಚಿವಾಲಯವಾಗಿದ್ದು, 17 ಇಲಾಖೆಗಳ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಕ್ರಿಯಾ ಯೋಜನೆಯಡಿ ಕೇಂದ್ರ ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79.156 ಕೋಟಿ ಅನುದಾನದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

car decor

2024-25 ರಿಂದ 2025-26 ರ ಆರ್ಥಿಕ ಸಾಲುಗಳಿಗೆ ಮೊದಲ ಹಂತದಲ್ಲಿ 4000 ಕೋಟಿ ಅನುದಾನವನ್ನು ನಿಗದಿಗೊಳಿಸಿದೆ. ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಶಿವಮೊಗ್ಗ ಜಿಲ್ಲೆಯ, ಶಿವಮೊಗ್ಗ ತಾಲ್ಲೂಕಿನ, ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸದಾಶಿವಪುರ ಎಂಬ 02 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗದಿಗೊಳಿಸಲಾಗಿದೆ. ಈ 02 ಗ್ರಾಮಗಳಲ್ಲಿ ಈ ಕೆಳಕಂಡ ಮೂಲಭೂತ ಸೌಕರ್ಯಗಳನ್ನು 17 ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆ– ಪಕ್ಕ ಮನೆಗಳು, ಸಂಪರ್ಕ ರಸ್ತೆ. 

ಗ್ರಾಮೀಣ ನೀರು ಸರಬರಾಜು ಇಲಾಖೆ- ನೀರು ಸರಬರಾಜು- ಜಲ ಜೀವನ್ ಮಿಷನ್. 

ವಿದ್ಯುತ್ ಇಲಾಖೆ- ಮನೆ ವಿದ್ಯುಧೀಕರಣ. 

ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ-ಆಪ್ -ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-ಸಂಚಾರಿ ವೈದ್ಯಕೀಯ ಘಟಕಗಳು ರಾಷ್ಟ್ರೀಯ ಆರೋಗ್ಯ ಮಿಷನ್, ಆಯುಷ್ ಮಾನ್ ಕಾರ್ಡ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ. 

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ-ಎಲ್ ಪಿಜಿ ಉಜ್ವಲ್ ಯೋಜನೆ ಸಂಪರ್ಕಗಳು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ-ಪೋಷಣ್ ಅಭಿಯಾನ

ಶಿಕ್ಷಣ ಇಲಾಖೆ-ವಿದ್ಯಾರ್ಥಿ ನಿಲಯಗಳ ನಿರ್ಮಾಣ- ಸಮಗ್ರ ಶಿಕ್ಷಾ ಅಭಿಯಾನ. 

ಆಯುಷ್ ಇಲಾಖೆ-ಪೋಷನ್ ವಾಟಿಕಾಸ್-ರಾಷ್ಟ್ರೀಯ ಆಯುಷ್ ಮಿಷನ್. 

ಕೌಶಲ್ಯಾಭಿವೃದ್ದಿ ಇಲಾಖೆ-ಸ್ಕಿಲ್ ಇಂಡಿಯಾ. 

ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಇಲಾಖೆ-ಡಿಜಿಟಲ್ ಇನಿಶಿಯೇಟಿವ್ಸ್ , 

ಕೃಷಿ ಇಲಾಖೆ -ಸುಸ್ಥಿರ ಕೃಷಿ ಉತ್ತೇಜನ. 

ಮೀನುಗಾರಿಕೆ ಇಲಾಖೆ-ಮೀನು ಸಂಸ್ಕೃತಿಯ ಬೆಂಬಲ. 

ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ-ಜಾನುವಾರು ಪಾಲನೆ -ರಾಷ್ಟ್ರೀಯ ಜಾನುವಾರು ಮಿಷನ್. 

ಪಂಚಾಯತ್ ರಾಜ್ ಇಲಾಖೆ-ಟ್ರೈಬಲ್ ಹೊಂ ಸ್ಟೇ ಸ್ವದೇಶ್ ದರ್ಶನ. 

ಬುಡಕಟ್ಟು ವ್ಯವಹಾರಗಳ ಸಚಿವಾಲಯ – ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ. 

ಇಷ್ಟೆ ಅಲ್ಲದೆ 100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಸರ್ಕಾರಿ/ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲ ಸೌಕರ್ಯಗಳನ್ನು ಸುಧಾರಿಸುವುದು. ಕೌನ್ಸಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು ಉನ್ನತ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡುವಂತಹ ಯೋಜನೆಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅವಕಾಶ ಕಲ್ಪಿಸಲಾಗುತ್ತಿದೆ. ಈ 02 ಗ್ರಾಮದ ಎಲ್ಲಾ ಬುಡಕಟ್ಟು ಜನಾಂಗದವರು ಸದರಿ ಯೋಜನೆಯ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

malenadutoday add
Share This Article
Facebook Whatsapp Whatsapp Telegram Threads Copy Link
Previous Article ನಾಳೆ ಇಡೀ ದಿನ ನವುಲೆ To ಗುಂಡಪ್ಪ ಶೆಡ್‌ವರೆಗೂ ಹಲವೆಡೆ ಕರೆಂಟ್‌ ಇರಲ್ಲ | ಸಾಗರದಲ್ಲಿ 26 ಕ್ಕೆ Mescom ಸಭೆ
Next Article Shimoga eid milad | ಶಿವಮೊಗ್ಗ ಈದ್‌ ಮಿಲಾದ್‌ ವಿಶೇಷ! ಇಲ್ಲಿದೆ ನೋಡಿ ಫೋಟೋ ಸ್ಟೋರಿ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA ISIS CONSPIRACY CASE | ಶಾಜೀಬ್‌, ತಾಹ ವಿರುದ್ಧ NIA ಚಾರ್ಜ್‌ಶೀಟ್‌ | ಎಲ್ಲದಕ್ಕೂ ಇವರಿಬ್ಬರೆ ಕಾರಣ?

By 13

ಹುಲಿ ಸಂರಕ್ಷಿತ ಪ್ರದೇಶಕ್ಕಾಗಿ ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿದ ಸಂತ್ರಸ್ಥರ ನೆಲದಲ್ಲಿ ನಡೆಯಬೇಕಿತ್ತು ರಜತ ಮಹೋತ್ಸವ ಕಾರ್ಯಕ್ರಮ…ಯಾಕಂತಿರಾ..?

By 2

ಬಸ್‌ ಸ್ಟ್ಯಾಂಡ್‌ನಲ್ಲಿ ಸಬಂಧಿಕರನ್ನ ಹತ್ತಿಸಿಕೊಂಡಿದ್ದಕ್ಕೆ ಆಟೋ ಚಾಲಕನಿಗೆ ಹಲ್ಲೆ & ಜೀವ ಬೆದರಿಕೆ

By 13

ರೈಲ್ವೆ ಟ್ರ್ಯಾಕ್‌ ಮೇಲೆ ಹೋಮ್‌ಗಾರ್ಡ್‌ ಮೃತದೇಹ | ಜೋಗದಲ್ಲಿ ಆ ತಪ್ಪು ಮಾಡಿದ್ದಕ್ಕೆ 24 ಸಾವಿರ ದಂಡ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up