SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ
ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಕೇಸ್ ಕೋರ್ಟ್ ತೀರ್ಪು
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ ತೀರ್ಥಹಳ್ಳಿ ತೀರ್ಥಹಳ್ಳಿ 1ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇಬ್ಬರು ಮಹಿಳೆಯರಿಗೆ ತಲಾ 1000 ದಂಡ, 6 ತಿಂಗಳ ಸಾದಾ ಕಾರಾಗೃಹ ವಾಸ, ಪುರುಷ ಆರೋಪಿಗೆ 2 ಸಾವಿರ ದಂಡ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಭದ್ರಾವತಿಯಲ್ಲಿ ಅನುಮಾನಸ್ಪದ ಸಾವು
ಅತ್ತ ಭದ್ರಾವತಿಯಲ್ಲಿ ಯುವಕನೊಬ್ಬ ಮನೆಯಿಂದ ಹೊರಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ಯುವಕ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಕರಣ ನಿಗೂಢವಾಗಿದ್ದು ಸ್ಪಷ್ಟ ಮಾಹಿತಿ ಲಭ್ಯವಾಗುತ್ತಿಲ್ಲ. ಸ್ಥಳೀಯರ ಅನುಮಾನದ ಪ್ರಕಾರ, ಇದೊಂದು ಕೊಲೆ ಘಟನೆ ಎಂದು ಶಂಕಿಸಲಾಗಿದೆ. ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಹಿನ್ನೆಲೆಯಲ್ಲಿ ಯುವಕನನ್ನ ಕೊಲೆ ಮಾಡಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗುತ್ತಿದೆ. ಆದರೆ ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟ ಪಡಿಸಿಲ್ಲ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಗಂಡನನ್ನ ಕೊಂದ ಹೆಂಡತಿಗೆ ಜೀವಾವಧಿ ಶಿಕ್ಷೆ
ಇನ್ನೂ ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು ಕೋರ್ಟ್ ತೀರ್ಪು ನೀಢಿದೆ. ಅಪರಾಧಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2018ರ ಜೂನ್ ತಿಂಗಳಿನಲ್ಲಿ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ವ್ಯಕ್ತಿಯೊಬ್ಬ ರಾತ್ರಿ ಮಲಗಿದ್ದವನು ಬೆಳಗ್ಗೆ ಸಾವನ್ನಪ್ಪಿದ್ದ. ಆತನ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ