SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 9, 2024 Shimoga news
ಶಿವಮೊಗ್ಗ ನಗರದ ಗಾರ್ಡನ್ ಏರಿಯಾ ಎರಡನೇ ಕ್ರಾಸ್ನಲ್ಲಿರುವ ಕನ್ಸರ್ವೆನ್ಸಿಯ ಒಳಚರಂಡಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಈ ಬಗ್ಗೆ ಆತನ ಗುರುತು ಪತ್ತೆಗಾಗಿ ಪೊಲೀಸ್ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ. ಪ್ರಕಟಣೆಯ ವಿವರ ಹೀಗಿದೆ.
ಶಿವಮೊಗ್ಗ ಪೊಲೀಸ್ ಪ್ರಕಟಣೆ -Shimoga police
ಕಳೆದ ಸೆಪ್ಟೆಂಬರ್ ಏಳನೇ ತಾರೀಖು ಗಾರ್ಡನ್ ಏರಿಯಾ 2ನೇ ಕ್ರಾಸ್ ನಲ್ಲಿರುವ ಸೂರ್ಯ ನರ್ಸಿಂಗ್ ಕಾಲೇಜ್ ಪಕ್ಕದ ಕನ್ಸರವೆನ್ಸಿ ರಸ್ತೆ ಒಳಚರಂಡಿಯಲ್ಲಿ ಸುಮಾರು 45-50 ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಈ ವ್ಯಕ್ತಿಯ ಕುರುಹು ಪತ್ತೆಯಾಗಿಲ್ಲ , ಈತನ ವಿಳಾಸ, ಹೆಸರು, ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ.
ದೊಡ್ಡಪೇಟೆ ಪೊಲೀಸ್ ಠಾಣೆ –doddapete police station
05.06 ಅಡಿ ಎತ್ತರ, ಗೋದಿ ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿರುವ ವ್ಯಕ್ತಿಯ ಮೈಮೇಲೆ ಕಪ್ಪು ಬಣ್ಣದ ಚಡ್ಡಿ ಇರುತ್ತದೆ. ಈ ವ್ಯಕ್ತಿಯ ವಾರಸ್ಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9916882544 ನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
————————–
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ