SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 11, 2024 | SHIVAMOGGA NEWS | ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ 6ನೇ ಕ್ರಾಸ್‌ನಲ್ಲಿ ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಪ್ರಜ್ಞಾಹೀನ ಸ್ಥಿತಿ ಯಲ್ಲಿ ಪತ್ತೆಯಾಗಿದ್ದ.
ಆತನನ್ನ ಸಾರ್ವಜನಿಕರ ಸಹಾಯದಿಂದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ತಪಾಸಣೆ ಮಾಡಿದಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇದೀಗ ಈತನ ಸುಳಿವು ಪತ್ತೆಗಾಗಿ ಪೊಲೀಸರು ಪ್ರಕಟಣೆ ನೀಡಿದ್ದಾರೆ
ಈತನ ಹೆಸರು, ವಿಳಾಸ, ವಾರಸ್ಸುದಾರರ ಬಗ್ಗೆ ಯಾವುದೇ ಮಾಹಿತಿ ದೊರಕಿರುವುದಿಲ್ಲ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ವ್ಯಕ್ತಿಯ ಚಹರೆ 5.7 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮುಖ, ಕೈಕಾಲುಗಳ ಮೇಲೆ ತರಚಿದ ಗಾಯವಿರುತ್ತದೆ. ಮೈಮೇಲೆ ನೀಲಿ ಮತ್ತು ಬಿಳಿ ಬಣ್ಣದ ಚೌಕಳಿಯ ತುಂಬು ತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ವಾರಸ್ಸುದಾರರ ಬಗ್ಗೆ ತಿಳಿದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9916882544 ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
———————-
SUMMARY | Shivamogga: A 50-year-old man was found dead at Anna Nagar 6th Cross under Doddapet police station limits.
KEYWORDS | Shivamogga, man was found dead , Anna Nagar 6th Cross , Doddapete police station limits