SHIVAMOGGA | MALENADUTODAY NEWS | ಮಲೆನಾಡು ಟುಡೆ Nov 1, 2024
ಕಾಡಾನೆಯ ಉಪಟಳದ ನಡುವೆ ಶಿವಮೊಗ್ಗದ ಹೊಸನಗರ ತಾಲ್ಲೂಕುನಲ್ಲಿ ಚಿರತೆ ಕಾಟ ವಿಪರೀತವಾಗಿದೆ. ಅಲ್ಲದೆ ಈ ಚಿರತೆ ಸ್ಥಳೀಯರಲ್ಲಿ ಆತಂಕ ಮೂಡಿಸುತ್ತಿದೆ.
ಹೊಸನಗರ ತಾಲ್ಲೂಕಿನ ಹಲುಸಾಲೆ ಮಳವಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇಲ್ಲಿ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಓಡಾಡಿರುವ ಹೆಜ್ಜೆ ಗುರುತುಗಳು ಕಾಣ ಸಿಕ್ಕಿವೆ. ಇದನ್ನ ಪರಿಶೀಲಿಸಿದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಇನ್ನೂ ಗ್ರಾಮದ ನಿವಾಸಿಯೊಬ್ಬರು ಬೆಳಿಗ್ಗೆ ಹಾಲು ತರಲು ಹೋಗುತ್ತಿದ್ದಾಗ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆ ಓಡಾಡುತ್ತಿರುವುದನ್ನು ಕಂಡಿದ್ದಾರೆ.
ಹೀಗಾಗಿ ಅರಣ್ಯಾಧಿಕಾರಿಗಳಿಗೆ ವಿವರ ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
SUMMARY | The leopard was spotted at Halusale Malavalli village in Hosanagara taluk.
KEYWORDS | leopard was spotted at Halusale Malavalli village in Hosanagara taluk.