SHIVAMOGGA | MALENADUTODAY NEWS | ಮಲೆನಾಡು ಟುಡೆ Oct 29, 2024
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ರಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ. ತಕ್ಷಣವೇ ಚಿಕಿತ್ಸೆ ನೀಡಿ, ಆಪರೇಷನ್ ನಡೆಸದೇ ಹೋದಲ್ಲಿ ಅವರಿಗೆ ಪಾರ್ಶ್ವವಾಯು(ಲಕ್ವ) ಹೊಡೆಯವ ಅಪಾಯವಿದೆ ಎಂದು ಅವರ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದು ಜಾಮೀನು ನೀಡುವಂತೆ ಕೋರಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಎದುರು ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದೆ. ದರ್ಶನ್ ರವರ ಆರೋಗ್ಯಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ಮುಚ್ಚಿದ ಲಕೋಟೆಯಲ್ಲಿನ ವರದಿಯನ್ನು ಕೋರ್ಟ್ಗೆ ನೀಡಿದ್ದಾರೆ.
ಈ ವೇಳೆ ದರ್ಶನ್ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ದರ್ಶನ್ ತೀವ್ರವಾದ ಆರೋಗ್ಯ ಸಮಸ್ಯೆಗಳಿಂದ ಒದ್ದಾಡುತ್ತಿದ್ದಾರೆ. ಅವರ ಬೆನ್ನುಹುರಿಯ ಸಮಸ್ಯೆಗೆ ಸಂಬಂಧಿಸಿದಂತೆ ಎಂಆರ್ಐ (ಮ್ಯಾಗ್ನೆಟಿಕ್ ರೆಸೊನಾನ್ಸ್ ಇಮೇಜಿಂಗ್) ಮತ್ತು ಸಿ.ಟಿ ಸ್ಕ್ಯಾನ್ (ಕಂಪ್ಯೂಟೆಡ್ ಟೊಮೊಗ್ರಫಿ) ಮಾಡಿಸಲಾಗಿದ್ದು, ತುರ್ತಾಗಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಇವತ್ತು ದರ್ಶನ್ರವರ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ಮುಂದುವರಿಯಲಿದೆ.
SUMMARY | Cv Nagesh’s lawyer, who has filed a petition on behalf of Darshan in the High Court, argued that darshan may suffer from paralysis.
KEYWORDS | Cv Nagesh lawyer, petition on behalf of Darshan , High Court, darshan may suffer from paralysis,