SHIVAMOGGA | MALENADUTODAY NEWS | ಮಲೆನಾಡು ಟುಡೆ Jan 7, 2025
ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) Human metapneumovirus ಸೋಂಕಿನ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಸುತ್ತೊಲೆಯೊಂದನ್ನ ಹೊರಡಿಸಿದೆ. ಈ ಸೋಂಕಿನ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ ಎಂದಿರುವ ಇಲಾಖೆ ಏನು ಮಾಡಬೇಕು ಏನು ಮಾಡಬಾರದು ಎನ್ನುವ ಸಲಹೆಗಳನ್ನು ಸಹ ನೀಡಿದೆ.
HMPV ಚಳಿಗಾಲದ ಅವಧಿಯಲ್ಲಿ ಸಾಮಾನ್ಯ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ, ವಿಶೇಷವಾಗಿ ಕಿರಿಯ ಮತ್ತು ವಯಸ್ಸಾದವರಲ್ಲಿ ಈ ಸೋಂಕು ತುಸು ಬಾಧಿಸುತ್ತದೆ. ಇನ್ನು ಇಲಾಖೆಯು ತಿಳಿಸಿರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯದೊಳಗೆ ಸಾಮಾನ್ಯ ಶೀತ, ILI ಮತ್ತು SARI ನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಷಿಸಿದೆ ಮತ್ತು ಹಿಂದಿನ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್ 2024 ರಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಗಮನಾರ್ಹ ಏರಿಕೆ ಕಂಡುಬಂದಿಲ್ಲ ಎಂದು ತಿಳಿಸಿದೆ.
ಅಲ್ಲದೆ ಚಳಿಗಾಲದ ಸಂದರ್ಭದಲ್ಲಿ ಈ ರೀತಿಯ ಸೋಂಕುಗಳು ಹರಡುವುದನ್ನು ತಡೆಯಲು ಕೆಲವು ಮಾಡಬೇಕಾದ ಮತ್ತು ಮಾಡಬಾರದಂತ ಕ್ರಮಗಳನ್ನು ಇಲ್ಲಿ ಸೂಚಿಸಲಾಗಿದೆ.
ಏನು ಮಾಡಬೇಕು
ನೀವು ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಿ.
ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಆಗಾಗ್ಗೆ ತೊಳೆಯಿರಿ,
ಕಿಕ್ಕಿರಿದ ಸ್ಥಳಗಳನ್ನು ತಪ್ಪಿಸಿ ನಿಮಗೆ ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ.
ಮನೆಯಲ್ಲಿಯೇ ಇರಿ ಮತ್ತು ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಿ
ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ
ಏನು ಮಾಡಬಾರದು
ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಅನ್ನು ಮರುಬಳಕೆ ಮಾಡಬೇಡಿ
ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ ಹೊಂದುವುದು ಅಥವಾ ಅವರ ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳುವುದು ಮಾಡಬೇಡಿ
ಆಗಾಗ್ಗೆ ಕಣ್ಣು, ನೋಟು ಮತ್ತು ಬಾಯಿಯನ್ನು ಸ್ಪರ್ಶಿಸುವುದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮಾಡಬೇಡಿ
ವೈದ್ಯರ ಸಲಹೆಯಿಲ್ಲದೆ ಸ್ವ-ಔಷಧಿ ಮಾಡಿಕೊಳ್ಳದಿರಿ, ಅನಾರೋಗ್ಯವಿದ್ದರೇ ವೈದ್ಯರನ್ನು ಸಂಪರ್ಕಿಸಿ
SUMMARY | Department of Health and Family Welfare Services has issued a circular regarding the Human Metapneumovirus (HMPV) infection in China.
KEY WORDS | Department of Health and Family Welfare Services issued a circular, Department of Health and Family Welfare Services regarding the Human Metapneumovirus, HMPV, Human Metapneumovirus , China infection , china virus