SHIVAMOGGA | MALENADUTODAY NEWS | ಮಲೆನಾಡು ಟುಡೆ Jan 11, 2025
ಶಿವಮೊಗ್ಗ ಜಿಲ್ಲೆ ಬಿಆರ್‌ಪಿ ಜಂಕ್ಷನ್ ಬಳಿಯಲ್ಲಿ ನಿನ್ನೆದಿನ ಅಪಘಾತ ಸಂಭವಿಸಿದೆ. ಇಲ್ಲಿನ ರಂಗನಾಥಪುರ ಬಳಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ತರೀಕೆರೆ ತಾಲ್ಲೂಕಿನ ನೇರಲಕೆರೆ ಗ್ರಾಮದ ದೇವರಾಜ್ ಎಂಬುವರು ಸ್ನೇಹಿತರ ಜತೆ ಶಿವಮೊಗ್ಗದಿಂದ ತರೀಕೆರೆ ಕಡೆಗೆ ಹೋಗುತ್ತಿದ್ದರು.
ಈ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಸಾರ್ವಜನಿಕರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರಿಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಪ್ರಕರಣ ಇದಾಗಿದೆ.
SUMMARY | A car overturned and fell into a ditch near BRP Junction in Shimoga district.
KEY WORDS | car overturned and fell into a ditch, BRP Junction in Shimoga district.