SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 23, 2025
ಶಿವಮೊಗ್ಗ | ಜನವರಿ 24 ರಂದು ಲೋಕೋಪಯೋಗಿ ಇಲಾಖೆಯು ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್)ದಲ್ಲಿ ಸರ್ವಾಂಗೀಣ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಬೆಳಿಗ್ಗೆ 10.30ಕ್ಕೆ ಆಯೋಜಿಸಿದೆ.
ಈ ಕಾರ್ಯಕ್ರಮದ ಶಂಕು ಸ್ಥಾಪನೆಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿರವರು ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪರವರ ಉಪಸ್ಥಿತರಿರಲಿದ್ದಾರೆ. ಹಾಗೆಯೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪರವರು ವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಮತ್ತು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇವರುಗಳು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
SUMMARY | The public works department will lay the foundation stone for the all-round development work at Allama Prabhu Park (Freedom Park) in the city on January 24.
KEYWORDS | Freedom Park, shivamogga, development work,