ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಡಿ.03 ರಂದು ಶನಿವಾರ ಬೆಳಿಗ್ಗೆ 10:00 ಗಂಟೆಗೆ ಕಾಲೇಜಿನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎಂಜಿನಿಯರಿಂಗ್ ವಿಭಾಗಗಳಿಗೆ ನೂತನವಾಗಿ ಪ್ರವೇಶಾತಿ ಪಡೆದಿರುವ, ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಓರಿಯಂಟೇಷನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷಾದ ಜಿ.ಎಸ್.ನಾರಾಯಣ ರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿರುವರು.
ಸರ್ಕಾರಿ ಅಧಿಕಾರಿಗಳೇ ಹುಷಾರ್ | ರಹಸ್ಯ ಕ್ಯಾರ್ಯಾಚರಣೆ ಹೆಸರಿನಲ್ಲಿ ಹೆದರಿಸುವವರಿದ್ದಾರೆ?
ನಾಲ್ಕು ವರ್ಷಗಳ ಎಂಜಿನಿಯರಿಂಗ್ ವ್ಯಾಸಂಗದ ಮುಂದಣ ಹೆಜ್ಜೆ, ಎಂಜಿನಿಯರಿಂಗ್ ವಿಭಾಗಗಳ ಪರಿಚಯ, ವಿಶ್ವವಿದ್ಯಾಲಯದ ಮಾರ್ಗಸೂಚಿಗಳು, ವಿವಿಧ ಮೂಲಭೂತ ಸೌಲಭ್ಯಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link