SHIVAMOGGA | MALENADUTODAY NEWS | ಮಲೆನಾಡು ಟುಡೆ Dec 5, 2024
ಜೇನು ಸಾಕುವ ಆಸಕ್ತಿಯಿದ್ದಲ್ಲಿ ಅದಕ್ಕೆ ಬೇಕಾದ ತರಬೇತಿ ಹಾಗೂ ಪ್ರೋತ್ಸಾಹವನ್ನು ನವುಲೆಯ ಕೃಷಿ ವಿಜ್ಞಾನ ಕೇಂದ್ರ ನೀಡುತ್ತಿದೆ. ಈ ನಿಟ್ಟಿನಲ್ಲಿ ಜೇನು ಸಾಕಣೆ ತರಬೇತಿಗಾಗಿ ಅವಕಾಶ ಕಲ್ಪಿಸಿದೆ.
ನವುಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜೇನು ಸಾಕಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ 18 ರಿಂದ 35 ವರ್ಷದ ಯುವಕ- ಯುವತಿಯರು/ರೈತರು ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಮೊದಲ 20 ಅರ್ಹ ಅಭ್ಯರ್ಥಿಗಳಿಗೆ ಅವಕಾಶವಿದ್ದು, ತರಬೇತಿಗೆ ರೈತರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ನೀಡಲಾಗುವುದು. ಆಸಕ್ತರು ಡಾ. ಆರ್. ದೀಶ್, ವಿಜ್ಞಾನಿ (ಸಸ್ಯ ಸಂರಕ್ಷಣೆ), ಕೃಷಿ ವಿಜ್ಞಾನ ಕೇಂದ್ರ, ನವಿಲೆ, (ಮೊ: 9739916660) ಇವರನ್ನು ಸಂಪರ್ಕಿಸಬಹುದು. ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
SUMMARY | The Krishi Vigyan Kendra, Navle is providing training and encouragement to those interested in beekeeping.
KEY WORDS | Krishi Vigyan Kendra, Navile , bee keeping training