SHIVAMOGGA | MALENADUTODAY NEWS | Aug 19, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ್ ಪಾಲ್ಸ್ ಬಳಿಯಲ್ಲಿ ಬಸ್ ಅಡಿಗೆ ಬಿದ್ದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ಬಸ್ ನಿಂದ ಆಯತಪ್ಪಿ ಬಿದ್ದ ಯುವಕನ ಮೇಲೆ ಚಕ್ರ ಹರಿದಿದ್ದು, ಕೈ, ಕಾಲಿಗೆ ತೀವ್ರ ಪೆಟ್ಟಾಗಿದೆ.ಆತನನ್ನ ಅಭಿಷೇಕ್ (29) ಎಂದು ಗುರುತಿಸಲಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಬಸ್‌ನಲ್ಲಿ ಅಭಿಷೇಕ್ ಬಸ್‌ನ ಹಿಂಬಾಗಿಲ ಬಳಿಯಲ್ಲಿ ನಿಂತಿದ್ದರು. ಮುಂದಕ್ಕೆ ಸಾಗುತ್ತಿದ್ದ ಬಸ್ ಚಾಲಕ ಬ್ರೇಕ್ ಹಾಕಿದ್ದರಿಂದ ಸಡನ್ ಆಗಿ ನಿಂತಿದೆ. ಈ ವೇಳೆ ಆಯತಪ್ಪಿದ ಯುವಕ ಕೆಳಕ್ಕೆ ಬಿದ್ದಿದ್ದಾನೆ. ಆತನ ಮೇಲೆ ಬಸ್ ಹರಿದಿದೆ. ಸದ್ಯ ಅಭಿಷೇಕ್ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫಾಲ್ಸ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಅವಘಡ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಅಪಘಾತಕ್ಕೆ ಕಾರಣವಾದ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಹಿಂಬದಿ ಬಾಗಿಲ ಬಳಿ ನಿಂತಿದ್ದ ಯುವಕ ಬಸ್ ಬ್ರೇಕ್ ಹಾಕಿದ ತಕ್ಷಣ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಯಿತು. ಹೆಚ್ಚಿನ ಚಿಕಿತ್ಸೆಗೆ ಸಾಗರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ