SHIVAMOGGA| MALENADUTODAY NEWS | ಮಲೆನಾಡು ಟುಡೆ Mar 16, 2025
ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರವೇಶಕ್ಕೆ ಪ್ರವಾಸಿಗರಿಗೆ ವಿಧಿಸಿರುವ ನಿರ್ಬಂಧ ಮುಂದುವರೆಸಲಾಗಿದೆ. ಈ ಸಂಬಂಧ ಪೂರ್ತಿ ವರದಿಯನ್ನು ಇಲ್ಲಿ ಓದಬಹುದು Ban on tourist entry to Jog Falls | ಜೋಗ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ ವಿಸ್ತರಣೆ | ಎಲ್ಲಿವರೆಗೂ ಗೊತ್ತಾ?
ಇದರ ಬೆನ್ನಲ್ಲೆ ಇದೀಗ ಚಿಕ್ಕಮಗಳೂರಿನಲ್ಲಿ ಮೂರು ಬೆಟ್ಟ ಪ್ರದೇಶಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠದಲ್ಲಿ ಮಾರ್ಚ್ 15 ರಿಂದ 17ರವರೆಗೆ ವಾರ್ಷಿಕ ಉರುಸ್ ಕಾರ್ಯಕ್ರಮ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಹೆಚ್ಚು ಜನರು ಇಲ್ಲಿಗೆ ಬರುವ ಸಾಧ್ಯತೆ ಇದೆ. ಆದರೆ ಐಡಿ ಪೀಠಕ್ಕೆ ತೆರಳುವ ರಸ್ತೆಯಲ್ಲಿ ಕಿರಿದಾಗಿದ್ದು, ಅಪಾಯಕ್ಕೆ ದಾರಿ ಮಾಡಿಕೊಡುವ ಸಂಭವವಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ರಸ್ತೆಯಲ್ಲಿ ಮೂರು ದಿನಗಳ ಕೆಎಸ್ಆರ್‌ಟಿಸಿ ಮತ್ತು ಕೆಎಸ್‌ಆರ್‌ಪಿ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿದ್ದಾರೆ.
ಇನ್ನೂ ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಮತ್ತು ಝರಿಫಾಲ್ಸ್ ಈ ಭಾಗದಲ್ಲಿಯೇ ಬರುವುದರಿಂದ ಪ್ರವಾಸಿಗರ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಈಗಾಗಲೇ ಬಾಬಾ ಬುಡನ್ ಗಿರಿಯ ವ್ಯಾಪ್ತಿಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ.