SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 16, 2025
ಶಿವಮೊಗ್ಗ | ಜನವರಿ 18ರಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಸಾಗರದಲ್ಲಿ ಹಮ್ಮಿಕೊಂಡಿರುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಮಲೆನಾಡಿನ ಭಾಗದ ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಸಚಿವರಿಗೆ ಸಂಫೂರ್ಣವಾಗಿ ತಿಳಿಸಲಿದ್ದೇವೆ ಎಂದು ಸಂಸದರಾದ ಬಿವೈ ರಾಘವೇಂದ್ರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಶಿವಮೊಗ್ಗಕ್ಕೆ ಆಗಮಿಸುತ್ತಿರುವುದು ನಮ್ಮ ಮಲೆನಾಡಿನ ಯೋಗಾ ಎಂದು ಹೇಳಿದರೆ ತಪ್ಪಾಗಲಾರದು. ಸಚಿವರು ಇದೇ ತಿಂಗಳ 18 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಪ್ರೇರಣಾ ಕಾಲೇಜಿಗೆ ಆಗಮಿಸಿ ಆ್ಯಗ್ರಿಕಲ್ಕರ್ ಬೇಸಿಕ್ ಮಲೆನಾಡು ಸಾರ್ಟ್ ಅಪ್ ಸಮ್ಮೇಳನವನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ ಅವರು ಸಾಗರದ ಸಂತೆ ಮೈದಾನದಲ್ಲಿ ನಡೆಯುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಬೆಳಗ್ಗೆ 11 ಗಂಟೆಗೆ ಭಾಗವಹಿಸಲಿದ್ದಾರೆ ಎಂದರು. ಈ ಸಮಾರಂಭದಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಗಮಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಆರಗ-ಜ್ಞಾನೇಂದ್ರ, ಮೊದಲಾದವರು ಭಾಗಿಯಾಗಲಿದ್ದಾರೆ. ಅಡಿಕೆ ಬೆಳೆಗಾರ ಸಮಾವೇಶ ಸಮಿತಿಯ ಅಧ್ಯಕ್ಷ ಹೆಚ್.ಎಸ್.ಮಂಜಪ್ಪ ಹಾಗೂ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ರಾಮಚಂದ್ರಭಟ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಕಾರ್ಯಕ್ರಮಕ್ಕೆ ಅನೇಕ ಸಂಘ ಸಂಸ್ಥೆಗಳು ಇದಕ್ಕೆ ಸಹಕಾರ ನೀಡಿದೆ. ಈ ಸಂದರ್ಭದಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಎಲೆಚುಕ್ಕಿ ರೋಗ ಸೇರಿದಂತೆ ಅನೇಕ ರೈತರ ಸಮಸ್ಯೆಗಳನ್ನು ಇಲ್ಲಿ ಚರ್ಚಿಸಲಾಗುತ್ತದೆ ಎಂದರು.
ಹಾಗೆಯೇ ರೈತರಿಗೆ ಕೇಂದ್ರ ಸರ್ಕಾರ ಎಲೆಚುಕ್ಕಿ ರೋಗದಿಂದ ಆದ ನಷ್ಟವನ್ನು ಬರಿಸಬೇಕೆಂದು ಕೇಂದ್ರದಲ್ಲಿ ಮನವಿ ಮಾಡುತ್ತೇವೆ. ಹಾಗೆಯೇ ಕರ್ನಾಟಕದಲ್ಲಿ ಒಂದು ಅಡಿಕೆ ಸಂಶೋಧನಾ ಕೇಂದ್ರ ಬೇಕು, ರೈತರ ಬೆಳೆಗಳನ್ನು ಆಮದು ಮಾಡಲು ಹೆಚ್ಚು ಒತ್ತನ್ನು ನೀಡಬೇಕು, ಅಕ್ರಮವಾಗಿ ಬರುವ ಅಡಿಕೆಯನ್ನು ತಡೆಗಟ್ಟಲು ಸೂಕ್ತ ಕಾನೂನನ್ನು ಜಾರಿಗೆ ತರಬೇಕು ಎಂಬ ಅಂಶಗಳನ್ನು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಇಡೇರಿಸಬೇಕೆಂದು ಕೃಷಿ ಸಚಿವರ ಮೂಲಕ ಒತ್ತಾಯಿಸುತ್ತಿದ್ದೇವೆ. ರೈತರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ವರದಿಯನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ನುರಿತ ಸಂಶೋಧಕರನ್ನು ಕರೆಸಿ ಅದಕ್ಕೆ ಬಜೆಟ್ ನೀಡಿ ಸಂಶೋಧನೆ ಮಾಡಿಸಬೇಕು. ಇದರಿಂದಾಗಿ ಅಡಿಕೆ ಮಾರಕವಲ್ಲ ಎಂಬ ವಿಷಯವನ್ನು ವಿಶ್ವ ಆರೋಗ್ಯ ಸಂಸ್ಥೆಗೆ ತಿಳಿಸಬೇಕು ಎಂದರು.
SUMMARY | Mp B Y Raghavendra said that he would fully apprise the minister of the problems faced by arecanut growers in Malnad region.
KEYWORDS | Mp B Y Raghavendra, arecanut, formers,