SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 13, 2025
ಶಿವಮೊಗ್ಗ | ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಇವರ ವತಿಯಿಂದ ಶ್ರೀ ಶಿವಯೋಗಿ ಸಿದ್ದೇಶ್ವರ ಜಯಂತಿಯನ್ನು ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು.
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ವಹಿಸಲಿದ್ದು, ಕಾರ್ಯಕ್ರಮಕ್ಕೆ ವಿಶೇಷವಾಗಿ ಶ್ರೀ ತಂಗಡಗಿ ಶಿವರಾಜ್ ಸಂಗಪ್ಪ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲ್ಯಾಣ ಸಚಿವರನ್ನು ಆಹ್ವಾನಿಸಲಾಗಿದೆ ಎಂದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭದ್ರಾವತಿ ಕ್ಷೇತ್ರದ ಶಾಸಕರು ಶ್ರೀ ಬಿಕೆ ಸಂಗಮೇಶ್ವರ್, ಸಾಗರ ಕ್ಷೇತ್ರದ ಶಾಸಕರಾದ ಶ್ರೀ ಬಿ ಕೆ ಗೋಪಾಲ ಕೃಷ್ಣ ಬೇಳೂರು, ಸಂಸದರಾದ ಬಿ ವೈ ರಾಘವೇಂದ್ರ, ತೀರ್ಥಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
SUMMARY | Sri Shivayogi Siddeshwara Jayanti will be celebrated on Jan. 14 at 10 am at Kuvempu Ranga Mandir.
KEYWORDS | Sri Shivayogi Siddeshwara Jayanti, Kuvempu Ranga Mandira, shimoga,