SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 5, 2024
ಶಿವಮೊಗ್ಗ | ಡಿಜಿಟಲ್ ತಂತ್ರಜ್ಞಾನ ಬಳಸಿ ಮಹಿಳಾ ಉದ್ಯಮಿಗಳು ಉನ್ನತ ಸಾಧನೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಉಬುಂಟು ಒಕ್ಕೂಟ, ಸ್ವೇದ ಮಹಿಳಾ ಉದ್ಯಮಿಗಳ ಸಂಘ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಉದ್ಯಮಿಗಳಿಗೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಉದ್ಯಮದಲ್ಲಿ ಯಶಸ್ಸು ಸಾಧಿಸಲು ತಂತ್ರಜ್ಞಾನ ತುಂಬಾ ಅವಶ್ಯವಾಗಿದ್ದು, ಮಹಿಳೆಯರು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸಿ ದೊರೆತ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು. ದೊಡ್ಡ ಮಟ್ಟಕ್ಕೆ ಬೆಳೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಅವರು ಸರ್ಕಾರದ ಯೋಜನೆಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು. ನಂತರ SIDBI ಬ್ಯಾಂಕ್ ಶಾಖಾ ನಿರ್ವಾಹಕ ಶಿವಕುಮಾರ್ ಬಿಲ್ಲು ಅವರು ಹಣಕಾಸಿನ ದೊರೆಯುವಿಕೆ ಬಗ್ಗೆ ಮಾಹಿತಿ ನೀಡಿದರು. ತರಬೇತುದಾರರಾದ ರಚನಾ ಮಹೇಶ್ ಅವರು ಡಿಜಿಟಲ್ ತಂತ್ರಜ್ಞಾನದ ಬಳಕೆ ಬಗ್ಗೆ ತರಬೇತಿ ನೀಡಿದರು.
SUMMARY| District Chamber of Commerce and Industry President B. Gopinath said that women entrepreneurs should excel using digital technology.
KEYWORDS| B. Gopinath, women entrepreneurs, digital technology,