SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 23, 2024
ಶಿವಮೊಗ್ಗ| ಭದ್ರಾವತಿಯ ಎನ್ ಟಿ ಬಿ ಲೇಔಟ್ ಹೊಸ ಸಿದ್ದಾಪುರ ಬಳಿ ನಿರ್ಮಾಣವಾಗಿರುವ ಸಹ್ಯಾದ್ರಿ ಪಬ್ಲಿಕ್ ಸ್ಕೂಲ್ ಉದ್ಘಾಟನಾ ಕಾರ್ಯಕ್ರಮ ಡಿ. 26 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಭದ್ರಾವತಿ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್‍ನ ಕಾರ್ಯದರ್ಶಿ ಕಾಳೇಗೌಡ ಹೇಳಿದರು.
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಪಿ. ದೊರೈ ವಹಿಸಲಿದ್ದಾರೆ. ಹಾಗೆಯೇ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಗಳು, ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಾಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮಿಗಳು ಹಾಗೂ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠ, ಆನಂದಪುರ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಖ್ಯ ಅತಿಥಿಗಳಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಕೆ.ಎಸ್.ಆರ್.ಐ.ಡಿ.ಎಲ್.ನ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಮಾಜ ಸೇವಕರಾದ ಶಾರದಾ ಅಪ್ಪಾಜಿ, ಭದ್ರವಾತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಕಾರ್ಮಿಕ ಮುಖಂಡ ಡಿ.ಸಿ.ಮಾಯಣ್ಣ, ಭದ್ರಾವತಿ ತಾಲ್ಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಬೀರಯ್ಯ, ನಗರಸಭೆ ಸದಸ್ಯೆ ಆರ್.ನಾಗರತ್ನ ಅನಿಲ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ಸಹ ನಡೆಯಲಿದೆ ಎಂದರು.
SUMMARY | The inauguration ceremony of Sahyadri Public School, located near New Siddapura, NTB Layout, Bhadravathi, was held on December 1. It will be held at 11 am on The 26th, said Kalegowda, secretary of Bhadravathi Sahyadri Education Trust.
KEYWORDS | Sahyadri Public School, inauguration ceremony, Bhadravathi, Sahyadri Education Trust,