ಡಿ ಗುಕೇಶ್‌ ಹಾಗೂ ಮನು ಬಾಕರ್‌ಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 17, 2025

ನವದೆಹಲಿ | ಡಬಲ್‌ ಒಲಂಪಿಕ್‌ ಪದಕ ವಿಜೇತೆ ಮನು ಬಾಕರ್‌ ಹಾಗೂ ನೂತನ ವಿಶ್ವ ಚೆಸ್‌ ಚಾಂಪಿಯನ್‌ ಗುಕೇಶ್‌ ಡಿ ಅವರಿಗೆ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನ ಮಾಡಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಮನು ಭಾಕರ್ ಮತ್ತು  ಡಿ ಗುಕೇಶ್‌ ಪಡೆದರು. ಈ ವೇಳೆ ಅಲ್ಲಿ ನೆರೆದಿದ್ದವರು ಕ್ರೀಡಾ ಸಾಧಕರಿಗೆ ಚಪ್ಪಾಳೆಯ ಮೂಲಕ ಅಭಿನಂದಿಸಿದರು. 



22 ವರ್ಷದ ಭಾಕರ್ ಒಲಿಂಪಿಕ್ಸ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಗಳಲ್ಲಿ ಕಂಚಿನ ಪದಕ ಗೆದ್ದಿದ್ದರು. ಮತ್ತೊಂದೆಡೆ, 18 ವರ್ಷದ ಗುಕೇಶ್ ಕಳೆದ ತಿಂಗಳು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆದರು. ಹಾಗೆಯೇ  ವಿಶ್ವನಾಥನ್ ಆನಂದ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

SUMMARY | President Draupadi Murmu conferred the prestigious Major Dhyan Chand Khel Ratna award on double Olympic medallist Manu Bhaker and new world chess champion Gukesh D.

KEYWORDS |  Draupadi Murmu, Manu Bhaker, Gukesh D, award,

 

Share This Article