ತಪ್ಪು ಆಸ್ತಿ ವಿವರ | ಮಾಜಿ MLA ಗೆ ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

13

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 27, 2024 ‌ 

ಚುನಾವಣಾ ಆಯೋಗಕ್ಕೆ ತಪ್ಪು ಆಸ್ತಿ ವಿವರ ಕೊಟ್ಟ ಚಿತ್ರದುರ್ಗ ಮಾಜಿ ಶಾಸಕ ಉಮಾಪತಿಯವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಾಬೀತಾದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 3 ತಿಂಗಳ ಶಿಕ್ಷೆ ಮತ್ತು 1 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ. 

ಮಾಜಿ ಶಾಸಕ ಉಮಾಪತಿ ಅವರು ಚುನಾವಣೆ ಆಯೋಗಕ್ಕೆ ಸಲ್ಲಿಕೆ ಮಾಡಿದ ಆಸ್ತಿ ವಿವರದಲ್ಲಿ ತಪ್ಪು ಮಾಹಿತಿಯನ್ನು ಒದಗಿಸಿದ್ದರು ಎಂದು ದೂರಲಾಗಿತ್ತು. ಈ ಸಂಬಂಧ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆಯಾಗಿತ್ತು. 

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎ.ವಿ.ಉಮಾಪತಿ ಅವರಿಗೆ ಶಿಕ್ಷೆ ವಿಧಿಸಿದೆ

SUMMARY | Former Chitradurga MLA Umapathy has been sentenced to prison by a special court for public representatives for providing false assets to the Election Commission.

KEY WORDS  | Former Chitradurga MLA Umapathy has been sentenced to prison, special court for public representatives, providing false assets to the Election Commission.

Share This Article