SHIVAMOGGA | MALENADUTODAY NEWS | ಮಲೆನಾಡು ಟುಡೆ Oct 29, 2024
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವ ಗೃಹಿಣಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ವಿನೋಬ ನಗರ ರೈಲ್ವೆ ಟ್ರ್ಯಾಕ್ ನಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ರಾತ್ರಿ ಅವರು ತಾಳಗುಪ್ಪ-ಮೈಸೂರು ಟ್ರೈನ್ 16228 ಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಮೃತರನ್ನ ಕಮಲಾ ಬಿ.ಪಿ ಎಂದು ಗುರುತಿಸಲಾಗಿದೆ. 35 ವರ್ಷದ ಇವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಕಲಹವಾದ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಹೋಗಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆ ಹಾಗೂ ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮೆಗ್ಗಾನ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
SUMMARY | housewife, who works as an outsourced employee at The Meggan Hospital, committed suicide after being hit by a train. body found on the Vinoba Nagar railway track in the city. Talaguppa-Mysuru train 16228 last night.
KEYWORDS | housewife, employee at The Meggan Hospital, committed suicide, hit by a train, Vinoba Nagar railway track , Talaguppa-Mysuru train 16228,