SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 10, 2025
ತೀರ್ಥಹಳ್ಳಿ ಸಮೀಪದ ಶಿವರಾಜಪುರದ ಬಳಿ ನಿನ್ನೆ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಾಶ್ವತ್ (30) ಮೃತ ಯುವಕ ಎಂದು ತಿಳಿದುಬಂದಿದೆ.
ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗುದ್ದು, ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಟೆಂಕ್ ಬೈಲು ನಿವಾಸಿಯಾಗಿದ್ದು ಡಿಸಿಸಿ ಬ್ಯಾಂಕ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SUMMARY | The accident took place near Shivarajapura near Thirthahalli late last night and the driver of the car died on the spot.
KEYWORDS | accident, Shivarajapura,Thirthahalli, died,