SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 20, 2024 Shiva Rajkumar
2 ಕಾರುಗಳ ನಡುವೆ ಡಿಕ್ಕಿ
ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2 ಕಾರುಗಳ ನಡುವೆ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳಿಗೆ ಚಿಕಿತ್ಸೆಯ ವ್ಯವಸ್ಥೆ ಮಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ರಕ್ಷಣೆ
ದಿ:18.09.2024ರಂದು ತೀರ್ಥಹಳ್ಳಿ ಠಾಣಾ ವ್ಯಾಪ್ತಿಯಿಂದ 112 ಪೊಲೀಸರಿಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿ ಕರೆಮಾಡಿದ್ದಾರೆ. ತುಸು ಸಹ ತಡಮಾಡದೇ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ. ಆ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮದುವೆ ವಿಚಾರಕ್ಕೆ ಎದುರು ಮನೆಯವರ ಕಿರಿಕ್
ಇತ್ತ ಸೊರಬದಲ್ಲಿ ಮದುವೆ ವಿಷಯವಾಗಿ ಎದುರು ಮನೆಯವರೊಂದಿಗೆ ಗಲಾಟೆಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ಧಾರೆ. ಆ ಬಳಿಕ ಠಾಣೆಗೆ ಬಂದು ದೂರು ಕೊಡಲು ತಿಳಿಸಿದ್ದು, ಠಾಣೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಕೆಲಸಕ್ಕೆ ಹೋಗದ ಮಗ ಪೊಲೀಸರಿಗೆ ಪೋಷಕರ ದೂರು
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಪೇಪರ್ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪೋಷಕರೊಬ್ಬರು ಪೊಲೀಸರಿಗೆ ಕರೆ ಮಾಡಿ ತಮ್ಮ ಮಗ ಕೆಲಸಕ್ಕೆ ಹೋಗದೇ ತಮಗೆ ತೊಂದರೆ ಕೊಡುತ್ತಿರುವುದಾಗಿ ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ದೂರುದಾರರ ಮಗನಿಗೆ ಕೆಲಸಕ್ಕೆ ಹೋಗುವಂತೆ ತಿಳಿಹೇಳಿದ್ದಾರೆ. ಅಲ್ಲದೆ ಪೋಷಕರಿಗೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿದ್ದಾರೆ.
ಕಾಯಿಕಳ್ಳ ಸಿಕ್ಕಿಬಿದ್ದ
ಭದ್ರಾವತಿ ಓಲ್ಡ್ ಟೌನ್ ವ್ಯಾಪ್ತಿಯಲ್ಲಿ ತೆಂಗಿನತೋಟದಲ್ಲಿ ಕಾಯಿಕಳ್ಳತನ ಮಾಡುತ್ತಿದ್ದ ಕಳ್ಳನೊಬ್ಬನನ್ನ ಸ್ಥಳೀಯರೇ ಹಿಡಿದಿದ್ದಾರೆ. ಆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಳೆನಗರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ