SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 5, 2024
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಈ ಹಿಂದೆ ಹೈಕೋರ್ಟ್ ದರ್ಶನ್ ಗೆ ಬೆನ್ನು ನೋವಿನ ಹಿನ್ನಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಮಂಜೂರಾತಿಗೆ ಅನೇಕ ವಿರೋಧಗಳು ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ರವರು ಸಹ ಈ ಹಿಂದೆ ದರ್ಶನ್ ಗೆ ನೀಡಿದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಗೃಹ ಇಲಾಖೆಯ ಅನುಮತಿ ಪಡೆದು ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
SUMMARY | An appeal was filed in the Supreme Court on Wednesday seeking cancellation of the interim bail granted to Darshan, an accused in the Renuka Swamy murder case.
KEYWORDS| Supreme Court, Darshan, Renuka Swamy murder case, kannadanews,