SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 19, 2024
ನಟೋರಿಯಸ್ ಕ್ರಿಮಿನಲ್ ವಿಲ್ಸನ್ ಗಾರ್ಡನ್ ನಾಗ ಗುಲಬರ್ಗಾ ಜೈಲಿಗೆ?
ಚಿತ್ರನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಸಾಥ್ ನೀಡಿದ ನಟೋರಿಯಸ್ ಕ್ರಿಮಿನಲ್ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಗುಲ್ಬರ್ಗಾ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ ಮಾಡಲು ಕಾರಾಗೃಹ ಇಲಾಖೆ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗಿದೆ. ಈ ಸಂಬಂಧ ಇನ್ನಷ್ಟೆ ಪ್ರಕ್ರಿಯೆ ನಡೆಯಬೇಕಿದೆ.
ನಟ ದರ್ಶನ್ ಸೇರಿದಂತೆ ಡಿ ಗ್ಯಾಂಗ್ ನ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ಬಳ್ಳಾರಿ,ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಿಗೆ ರವಾನೆ ಮಾಡಲಾಗಿತ್ತು. ಈ ನಡುವೆ ನಾಗನನ್ನ ವರ್ಗಾವಣೆ ಮಾಡಿರಲಿಲ್ಲ. ಇದೀಗ ಈತನನ್ನ ಎತ್ತಂಗಡಿ ಮಾಡಲು ನಿರ್ಧರಿಸಲಾಗಿದೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ