SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
darshan thoogudeepa photo parappana agrahara | ನಟ ದರ್ಶನ್ ತೂಗುದೀಪರವರ ಜೈಲಿನ ದೃಶ್ಯಗಳು ವೈರಲ್ ಆದ ಬೆನ್ನಲ್ಲೆ ಪರಪ್ಪನ ಅಗ್ರಹಾರದ ಒಂಬತ್ತು ಮಂದಿ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.
ಜೈಲಿನ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ, ಅಧೀಕ್ಷಕ ಮಲ್ಲಿಕಾರ್ಜುನ್ ಸ್ವಾಮಿ, ಜೈಲರ್‌ಗಳಾದ ಶರಣಬಸವ ಅಮೀನಗಡ, ಪ್ರಭು ಎಸ್. ಖಂಡೇಲವಾಲ, ಸಹಾಯಕ ಜೈಲರ್‌ಗಳಾದ ಶ್ರೀಕಾಂತ್ ತಳವಾರ್, ಎಲ್.ಎಸ್.ತಿಪ್ಪೇಸ್ವಾಮಿ, ಮುಖ್ಯ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್ ಕುಮಾರ್ ತಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ.
ಪ್ರಕರಣದ ಸಂಬಂಧ ಮೂರು ಎಫ್‌ಐಆರ್ ದಾಖಲಾಗಿದೆ. ಅಲ್ಲದೆ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ದರ್ಶನ್ ಹಾಗೂ ಅಮಾನತುಗೊಂಡಿರುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕಾರಾಗೃಹಗಳ ಇಲಾಖೆ ಡಿಐಜಿ ಸೋಮಶೇಖರ್ ದೂರು ನೀಡಿರುವ ಪ್ರತಿಯಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್‌ಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಜೈಲಿನಲ್ಲಿ ಕೈದಿಗಳೇ ವಿಶೇಷ ಸೌಲಭ್ಯಕ್ಕಾಗಿ ತಮ್ಮದೇ ತಂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೆ ಇದಕ್ಕಾಗಿ ಸಿಬ್ಬಂದಿಗಳು ನೆರವು ನೀಡುತ್ತಿದ್ದರು. ಹೊರಗಿನಿಂದ ಬರುವ ವಸ್ತುಗಳನ್ನ ಅಡ್ಜೆಸ್ಟ್‌ಮೆಂಟ್ ರೀತಿಯಲ್ಲಿ ಒಳಗಡೆ ರವಾನೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ
ಇನ್ನೂ ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೈರಲ್ ಆದ ಫೋಟೋಗಳಲ್ಲಿರುವ ದರ್ಶನ್ ಹಾಗೂ ಇತರರನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಿದ್ದಾರೆ.