SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 2, 2025
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ಬೆಂಗಳೂರು ನಗರ ಪೊಲೀಸರು ದರ್ಶನ್ ಸೇರಿದಂತೆ ಇನ್ನಿತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯ ಮೇಲ್ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ನಟ ದರ್ಶನ್ ಜೈಲಿನಿಂದ ಹೊರಬಂದ ಬಳಿಕ ಬೆನ್ನುನೋವಿನ ಚಿಕಿತ್ಸೆಗೆ ಒಳಗಾಗಿದ್ದರು. ನಂತರ ಚೇತರಿಸಿಕೊಂಡು ಶೂಂಟಿಗ್ ದೇವಸ್ಥಾನ ಸೇರಿದಂತೆ ಎಲ್ಲಡೆ ಭಾಗವಹಿಸಿ ಎಂದಿನಂತೆ ತಮ್ಮ ಲೈಫ್ ಸ್ಟೈಲ್‌ಗೆ ಹೊಂದಿಕೊಂಡು ಹೋಗಿದ್ದರು. ಆದರೆ ಆದರೆ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇನ್ನೂ ದರ್ಶನ್‌ರವರ ಬೆನ್ನು ಬಿಟ್ಟಂತೆ ಕಾಣುತ್ತಿಲ್ಲ. ಇಂದು ದರ್ಶನ್ ಸೇರಿದಂತೆ 7 ಜನರ ಜಾಮೀನಿನ ಭವಿಷ್ಯ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನವಾಗಲಿದೆ.
ಈ ಕುರಿತಾಗಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಈ ಹಿಂದೆಯೇ ನೋಟೀಸ್‌ನ್ನು ಸಹ ಜಾರಿಮಾಡಿತ್ತುಯ. ಸುಪ್ರೀಂ ಕೋರ್ಟ್‌ನಲ್ಲಿ ಈ ಕೇಸ್‌ನ್ನು ಗೆಲ್ಲಲು ದರ್ಶನ್ ಖ್ಯಾತ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದಾರೆ. ಜೊತೆಗೆ ಅವರಿಗೆ ಹೈಕೋರ್ಟ್‌ನಲ್ಲಿ ನಡೆದ ಎಲ್ಲಾ ದಾಖಲೆಗಳನ್ನೂ ನೀಡಲಾಗಿದೆ ಎನ್ನಲಾಗುತ್ತಿದೆ.
SUMMARY | The supreme court will hear the petition filed by the police today.
KEYWORDS | supreme court, darshan, renuka swami,