SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 28, 2024 | MYSORE DASARA 2024 | ದಸರಾ ಬಾಕ್ಸಿಂಗ್ ವಿಭಾಗ ಮಟ್ಟದಿಂದ ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಆಯ್ಕೆಯಾಗಿದ್ದಾರೆ ಮತ್ತು ಒಬ್ಬರು ತೃತೀಯ ಸ್ಥಾನ ಪಡೆದಿದ್ದಾರೆ.
ಸೆಪ್ಟೆಂಬರ್ 26ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಡ ಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಬಾಕ್ಸಿಂಗ್ ಆಯ್ಕೆ ಪ್ರಕ್ರಿಯೆಯಲ್ಲಿ
ಶಿವಮೊಗ್ಗ ಜಿಲ್ಲೆಯಿಂದ ಭಾಗವಹಿಸಿದ್ದ ಮೀನಾಕ್ಷಿ ಲೈಟ್ ವೆಲ್ಟರ್ ವೈಟ್ ವಿಭಾಗದಲ್ಲಿ ಹಾಗೂ ರಧ್ಯಾನ ಹೆವಿ ವೈಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ಅಕ್ಟೋಬರ್ 3ರಿಂದ6 ರವರಿಗೆ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮತ್ತು ಮತ್ತೋರ್ವ ಕ್ರೀಡಾಪಟು ಹರ್ಷಿತ್ ಫ್ಲೇ ವೈಟ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದನೆ ತಿಳಿಸಿದ್ದಾರೆ