SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 19, 2024
ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಮೆಸ್ಕಾಂ ಶಿವಮೊಗ್ಗ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 21 ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ ವಿಭಾಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಪವರ್ ಕಟ್
ಮೇಲ್ಕಂಡ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ,
ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ .

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ