SHIVAMOGGA | MALENADUTODAY NEWS | ಮಲೆನಾಡು ಟುಡೆ Dec 12, 2024
ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವರನ್ನ ಭೇಟಿಯಾಗಿ ಮನವಿ ಸಲ್ಲಿಸಿದೆ. ಶರಾವತಿ ಜಲವಿದ್ಯುತ್ ಯೋಜನೆಯ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ನಿಯೋಗ ಒತ್ತಾಯಿಸಿದೆ.
ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್‌ರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಚರ್ಚಿಸಿದ ನಿಯೋಗದ ಸದಸ್ಯರು ಸಾವಿರಾರು ಎಕರೆ ಭೂಮಿ ಕಳೆದುಕೊಂಡ ಸಂತ್ರಸ್ತ ಕುಟುಂಬಗಳು ತ್ಯಾಗ ಮಾಡಿದರೂ ಇಲ್ಲಿಯವರೆಗೂ ಸೂಕ್ತ ಪರಿಹಾರ ಕಾಣದೇ ಪರಿ ತಪಿಸುತ್ತಿವೆ.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ತನಿಖೆ ಕೈಗೆತ್ತಿ ಕೊಂಡಿದೆ. ಈ ಬೆಳವಣಿಗೆಯನ್ನು ಸಂಪೂರ್ಣ ಬಳಸಿಕೊಂಡು ನ್ಯಾಯಾಲಯದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಕೇಂದ್ರ ಸರ್ಕಾರ ಸಮರ್ಪಕ ವಾದ ಮಂಡಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಸಚಿವರನ್ನ ಒತ್ತಾಯಿಸಲಾಗಿದೆ. ಈ ವೇಳೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವ ಭರವಸೆ ನೀಡಿದರು.

ಸಂಸದರ ನಿಯೋಗದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಅಶೋಕ್ ನಾಯ್ಕ್ ಇದ್ದರು
SUMMARY | delegation led by Shivamogga MP BY RAGHAVENDRA met the Union Forest Minister in Delhi and submitted a memorandum. The delegation urged the Central government to intervene in providing justice to the victims of the Sharavathi
KEY WORDS | Shivamogga MP BY RAGHAVENDRA, Union Forest Minister in Delhi ,Central government to intervene in providing justice to the victims of the Sharavathi