SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024
ಶಿವಮೊಗ್ಗದ ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಹಾಗೂ ಹಾಲಿ ಶಾಸಕ ಎಸ್‌ಎನ್ ಚನ್ನಬಸಪ್ಪರವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಚೋದನಾತ್ಮಕ ಹೇಳಿಕೆ ವಿಚಾರದಲ್ಲಿ ಅವರ ವಿರುದ್ಧದ ಪ್ರಕರಣವನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈ ಬಿಟ್ಟಿದೆ.
ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಪಟ್ಟಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಹಾಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನ ಜನಪ್ರತಿನಿಧಿಗಳ ವಿಶೇಷನ್ಯಾಯಾಲಯ ಕೈಬಿಟ್ಟಿದೆ. ಈ ಮೂಲಕ ಇಬ್ಬರಿಗೂ ರಿಲೀಫ್ ಸಿಕ್ಕಂತಾಗಿದೆ.
ಹರ್ಷ ಹತ್ಯೆಯಾದ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ಮತ್ತು ಚನ್ನಬಸಪ್ಪ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ರಿಯಾಜ್ ಅಹ್ಮದ್ ಎಂಬವರು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿದ ದೂರುದಾರರು ಜನಪ್ರತಿನಿಧಿಗಳ ಕೋರ್ಟ್ ಮೊರೆಹೋಗಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರ ಕೊರತೆಯಿಂದಾಗಿ ಪೊಲೀಸರ ಬಿ ರಿಪೋರ್ಟ್ ಅನ್ನು ಪರಿಗಣಿಸಿದೆ.
SUMMARY | Former Shivamogga MLA KS Eshwarappa and sitting MLA SN Channabasappa got a big relief. A special court for people’s representatives has dropped the case against him for his provocative remarks.
KEYWORDS | Former Shivamogga MLA KS Eshwarappa, sitting MLA SN Channabasappa got a big relief, special court for people’s representatives, provocative remarks,