SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 14, 2024
ಬೆಂಗಳೂರು: ರೇಣುಕಾಸ್ವಾಮಿ ಕೊಲೆಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆನ್ನು ನೋವಿನ ಹಿನ್ನೆಲೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಈಗ ಆ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ರವರು ಮಾತನಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್ ಮಧ್ಯಂತರ ಜಾಮೀನಿನ ವಿಚಾರವಾಗಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದರು. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಹಾಗೆಯೇ ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು.
ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು.
SUMMARY | Renuka Swamy murder case, interim bail High Court Actor Darshan, Dr. G Parameshwar,
KEYWORDS | Renuka Swamy murder case, interim bail High Court Actor Darshan, Dr. G Parameshwar,