SHIVAMOGGA | MALENADUTODAY NEWS | ಮಲೆನಾಡು ಟುಡೆ Oct 22, 2024
ಇವತ್ತು ರಾಜ್ಯದೆಲ್ಲೆಡೆ ಆಸ್ತಿ ನೋಂದಣಿಯಾಗುವುದು ಕಷ್ಟ. ಏಕೆಂದರೆ ನಿನ್ನೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ. ರಿಜಿಸ್ಟ್ರೇಷನ್ ಕಾಯಿದೆ 1908ರಲ್ಲಿ 228 ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಛೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆಯನ್ನು / ನೋಂದಣಿಯನ್ನು ಅನಿರ್ದಿಷ್ಟಾವಧಿವರೆಗೂ ಮುಂದೂಡುತ್ತಿದ್ದೇವೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಸರ್ಕಾರ ತಂದ ತಿದ್ದುಪಡಿಯಿಂದ, ನಕಲಿ ದಾಖಲೆ ಆಧರಿಸಿ ಆಸ್ತಿ ದಸ್ತಾವೇಜು ನೋಂದಣಿ ಅಥವಾ ನಕಲಿ ದಸ್ತಾವೇಜು ಸೃಷ್ಟಿ ಮಾಡಿದರೆ ಜಿಲ್ಲಾ ನೋಂದ ಣಾಧಿಕಾರಿಗಳಿಗೆ ರದ್ದುಪಡಿಸಲು ಅಧಿಕಾರ ನೀಡಲಾಗಿದೆ. ಜತೆಗೆ ನಕಲಿ ದಾಖಲೆ ಆಧರಿಸಿ ನೋಂದಣಿ ಮಾಡಿದ ಉಪ ನೋಂದಣಾ ಧಿಕಾರಿಗಳಿಗೆ 3 ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಬಹುದು ಎಂದು ಹೇಳಲಾಗಿದೆ.
ಹೀಗಾಗಿ ಉಪ ನೋಂದಣಾಧಿಕಾರಿಗಳು ರಾಜ್ಯಾದ್ಯಂತ ಸೋಮವಾರ ಬೆಳಗ್ಗೆಯಿಂದ ದಸ್ತಾವೇಜುಗಳ ಪರಿಶೀಲನೆ ಹಾಗೂ ನೋಂದ ಣಿಯನ್ನು ಸ್ಥಗಿತಗೊಳಿಸಿದ್ದಾರೆ. ಸರ್ಕಾರದಿಂದ ಸ್ಪಷ್ಟತೆ ಬರುವವರೆಗೂ ನೋಂದಣಿ ಮಾಡುವುದಿಲ್ಲ ಎಂದು ಕೆಲವು ಕಚೇರಿಗಳಲ್ಲಿ ನೋಟಿಸ್ ಅಂಟಿಸಲಾಗುತ್ತಿದೆ.
SUMMARY | The registration of all kinds of documents, including property, has been suspended at sub-registrar’s offices across the state.
KEYWORDS | registration of all kinds of documents, including property, has been suspended, sub-registrars offices,