SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 24, 2024 shimoga fast news update
ಸೆ.25ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಉಪವಿಭಾಗ-2ರ ವ್ಯಾಪ್ತಿ ಗೋಪಿಶೆಟ್ಟಿಕೊಪ್ಪದಲ್ಲಿ ಹಳಿಎ ವಾಹಕ ಬದಲಾಯಿಸುವ ಕಾಮಗಾರಿ ಇರುವುದರಿಂದ ಸೆ.25 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಬರುವ ಹಳೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕಸ್ಟಿಂಗ್, ಸಲಂ ಫ್ಯಾಕ್ಟರಿ, ಚನ್ನಪ್ಪ ಬಸಪ್ಪ ಲೇಔಟ್, ಸ್ಮಶಾಣಕಟ್ಟೆ ಹಿಂಭಾಗ, ಗದ್ದೆಮನೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ವಾಹನಕ್ಕೆ ದಂಡ
ಶಿವಮೊಗ್ಗದ ಕೋರ್ಟ್ ಆವರಣದಲ್ಲಿ ಸರಿಯಾಗಿ ಪಾರ್ಕ್ ಮಾಡದೇ ನಿಲ್ಲಿಸಿದ ಬೊಲೆರೋ ವಾಹನಕ್ಕೆ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ವಾಹನವನ್ನು ಸರಿಯಾಗಿ ನಿಲ್ಲಿಸದೆ, ಒಂದು ಕಡೆಯಲ್ಲಿ ಇತರೇ ವಾಹನ ಸಂಚಾರಕ್ಕೆ ಅವಕಾಶ ಆಗದಂತೆ ನಿಲ್ಲಿಸಿದ್ದರಿಂದ ಕೋರ್ಟ್ ಆವರಣದಲ್ಲಿ ಸಮಸ್ಯೆಯಾಗಿತ್ತು. ಈ ಸಂಬಂಧ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ವಾಹನದ ಚಾಲಕರನ್ನ ಕರೆಸಿ ಅವರಿಗೆ ದಂಡ ವಿಧಿಸಿದ್ದಾರೆ.
PST ಶಿಕ್ಷಕರ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಿದ ಸರ್ಕಾರ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು, ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ್ಕೆ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ (One Time) ಪದನಾಮೀಕರಿಸುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಕೋರಿತ್ತು.
ಇದೀಗ ಬೇಡಿಕೆಗಳನ್ನ ಪರಿಶೀಲಿಸಿದ ಸರ್ಕಾರ ಸದರಿ ಬೇಡಿಕೆಗಳನ್ನು ಪರಿಗಣಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ಪರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಿದೆ.