SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 1, 2024 | SHIVAMOGGA NEWS | MEAT BAN ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆ ಇಡೀ ದಿನ ಮಾಂಸ ಮಾರಾಟವನ್ನ ನಿಷೇಧಿಸಲಾಗಿದೆ.
ಅಕ್ಟೋಬರ್ 02 ರಂದು ಗಾಂಧೀ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
