SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 25, 2024 SHIMOGA RAIN | ಶಿವಮೊಗ್ಗದಲ್ಲಿ ಬೆಳಗ್ಗೆಯಿಂದಲೂ ಹನಿ ಹನಿ ಮಳೆಯಾಗುತ್ತಿದೆ. ಜಿಲ್ಲೆಯ ಹಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು, ಹವಾಮಾನ ಇಲಾಖೆಯ ವರದಿ ಪ್ರಕಾರ, ಇವತ್ತು ಮತ್ತು ನಾಳೆ ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.
ನಾಳೆ, ಅಂದರೆ (26 ನೇ ಸೆಪ್ಟೆಂಬರ್ 2024) ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ, ಬೆಳಗಾವಿ, ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಮನ್ಸೂಚನೆ ನೀಡಲಾಗಿದ್ದು, ಗಾಳಿಯ ವೇಗ (40-50 kmph) ಇರಲಿದೆಯಂತೆ.