SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 3, 2025
ಪಕ್ಷದಲ್ಲಿರುವ ಎಲ್ಲಾ ಗೊಂದಲ ಹಾಗೂ ಆಂತರಿಕ ಕಲಹಗಳು ಇನ್ನು ಒಂದು ವಾರದಲ್ಲಿ ಸರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಇಂತಹ ವ್ಯವಸ್ಥೆ ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಬಿಜೆಪಿಯಲ್ಲಿ ಮಂಡಲ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಾನು ಯಾವ ರೀತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂಬುದು ಕಾರ್ಯಕರ್ತರಿಗೆ, ಪಕ್ಷದ ಮುಖಂಡರಿಗೆ ಗೊತ್ತಿದೆ ಎಂದರು.
ಈ ಹಿಂದೆ ಜಿಲ್ಲಾಧ್ಯಕ್ಷರ ಚುನಾವಣೆಗೂ ಪೈಪೋಟಿ ಇತ್ತು. ಈಗ ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಪೈಪೋಟಿ ಇದೆ. ಈ ಎಲ್ಲಾ ಬೆಳವಣಿಗೆಯನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಈ ಜಂಜಾಟದ ನಡುವೆ ನಾನು ರಾಜ್ಯದ ಬಿಜೆಪಿ ಅಧ್ಯಕ್ಷನಾಗುತ್ತೆನೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದರು.
ಪಕ್ಷಕ್ಕೆ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ
ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಮಾಜಿ ಸಚಿವ ಸದಾನಂದ ಗೌಡ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬುದಕ್ಕೆ ಉತ್ತರ ಸಿಗುತ್ತದೆ. ಅದಾದ ನಂತರ ಎಲ್ಲವೂ ಸರಿಯಾಗಲಿದೆ. ಕಳೆದ ವರ್ಷದಿಂದ ನಾನು ಎಲ್ಲಿಯೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ.ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ.ಇನ್ನೂ 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದ್ದು, ಎಲ್ಲಾ ಸಮಸ್ಯೆಗಳು ಬಗೆ ಹರಿಯಲಿದೆ ಎಂದರು.
SUMMARY | BJP state president BY Vijayendra said the confusion and infighting in the party will be resolved in a week’s time.
KEYWORDS | BJP state president, BY Vijayendra, party, resolved,