ಪತ್ನಿಯ ಜೊತೆ ಮಾತನಾಡಿದ್ದಕ್ಕೆ ಅಟೆಂಪ್ಟು ಮರ್ಡರ್ ಕೇಸ್ : ಕಾರು ಡಿಕ್ಕಿ ಹೊಡೆಸಿ ಕೊಲೆ ಯತ್ನ!

ಶಿವಮೊಗ್ಗ / ಜಿಲ್ಲೆಯ ತಾಲ್ಲೂಕು ಒಂದರಲ್ಲಿ ವ್ಯಕ್ತಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ ಕೊಲೆಗೆ ಯತ್ನಿಸಿದ ಆರೋಪವೊಂದು ಕೇಳಿಬಂದಿದ್ದು, ಈ ಸಂಬಂಧ ಠಾಣೆ ಒಂದರಲ್ಲಿ ಕೇಸ್ ಕೂಡ ದಾಖಲಾಗಿದೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದ್ದು, ಗಾಯಗೊಂಡಿರುವ ವ್ಯಕ್ತಿಯನ್ನು ತಾಲ್ಲೂಕು ಒಂದರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್ ಪ್ರಕಾರ, ಇಬ್ಬರ ಪರಿಚಯಸ್ಥರ ನಡುವೆ ಇಷ್ಟೆಲ್ಲಾ ಅದ್ವಾನ ಆಗಿದೆ. ದೂರುದಾರರು ಹಾಗೂ ಆರೋಪಿ ಇಬ್ಬರು ಪರಿಚಯಸ್ಥರಾಗಿದ್ದವರು. ಈ ಪರಿಚಯದ ಕಾರಣಕ್ಕೆ ಆರೋಪಿಯ ಪತ್ನಿಯವರು ದೂರುದಾರರ ಜೊತೆ ಫೋನ್​ನಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆರೋಪಿ ದೂರುದಾರರ ಮೇಲೆ ಸಿಟ್ಟಾಗಿದ್ದ. ಅಲ್ಲದೆ ಎಚ್ಚರಿಕೆ ಸಹ ನೀಡಿದ್ದನಂತೆ.

ಕಾರು ಡಿಕ್ಕಿ ಹೊಡೆಸಿ ಕೊಲೆ ಯತ್ನ!

ದಿನಾಂಕ 14-05-2026 ರಂದು ದೂರುದಾರರು ಕೆಲಸ ಮುಗಿಸಿಕೊಂಡು ವಾಪಾಸ್ ಊರಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ, ಅದಾಗಲೇ ಅಲ್ಲಿ ವ್ಯಾಗನರ್ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದ ಆರೋಪಿ ಹಿಂಬಾಲಿಸಲು ಶುರು ಮಾಡಿದ್ದಾನೆ. ಅಲ್ಲದೆ ಬೈಕ್​ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆಸಿ ಅಪಘಾತ ಮಾಡಿದ್ದಾನೆ. ಈ ವೇಳೆ ಬೈಕ್​ನಿಂದ ಹಾರಿದ ದೂರುದಾರರಿಗೆ ವಿದ್ಯುತ್ ಕಂಬವೊಂದು ಬಡಿದಿದೆ.

ಹೀಗೆ ಗಾಯಗೊಂಡ ದೂರುದಾರರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿ ಉಪರಿಚಿಸಿದ್ದರು. ಇದೀಗ ಈ ಸಂಬಂಧ ಸಂತ್ರಸ್ತ ನೀಡಿರುವ ದೂರಿನನ್ವಯ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸ್ತಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw