SHIVAMOGGA | MALENADUTODAY NEWS | Aug 22, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪತ್ರಕರ್ತನೊಬ್ಬನಿಗೆ ಪೊಲೀಸ್ ಅಧಿಕಾರಿಯೊಬ್ಬರು ನಿಂದಿಸಿ, ಪೋಕ್ಸೋ ಕೇಸ್ ಹಾಕಿ ಬಂಧಿಸುವ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪ್ರಜಾವಾಣಿ ಪತ್ರಿಕೆಯ ವರದಿಗಾರ ನಿರಂಜನ್‌ರವರ ಜೊತೆ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ ಅಶ್ವಥ್ ಗೌಡರವರು ಈ ರೀತಿಯಾಗಿ ವರ್ತಿಸಿದ್ದಾರೆ. ಇದನ್ನ ಶಿವಮೊಗ್ಗ ಜಿಲ್ಲೆಯ ಪತ್ರಕರ್ತ ಬಳಗ ಖಂಡಿಸಿದ್ದು, ಇವತ್ತು ಪ್ರತಿಭಟನೆಗೆ ನಿರ್ಧರಿಸಿದೆ.
ಏನಿದು ಪ್ರಕರಣ
ನಿನ್ನೆ ದಿನ ತೀರ್ಥಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಭೇಟಿಕೊಟ್ಟಿದ್ದರು. ಆ ಬಳಿಕ ಅವರು ಸ್ಥಳೀಯರ ಶಾಸಕರ ನಿಯೋಗದ ಜೊತೆಗೆ ಮಾತುಕತೆ ನಡೆಸಿದ್ದು. ನಿನ್ನೆ ದಿನ ತೀರ್ಥಹಳ್ಳಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ವಿಚಾರಣೆ ಸಂಬಂಧ ಎಸ್‌ಪಿಯವರು ತೀರ್ಥಹಳ್ಳಿಯಲ್ಲಿಯೇ ಮೊಕ್ಕಾಂ ಹೂಡಿದ್ದರು. ಆ ಬಳಿಕ ಅವರು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ನಿಂದ ನಿರ್ಗಮಿಸುವಾಗ ಅಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ವೇಳೆ ಸ್ಥಳದ ಚಿತ್ರೀಕರಣಕ್ಕೆ ನಿರಂಜನ್ ಮುಂದಾಗಿದ್ದಾರೆ.
ಇದೇ ಕಾರಣಕ್ಕೆ ಸಿಟ್ಟಾದ ಇನ್ಸ್‌ಪೆಕ್ಟರ್ ಅಶ್ವತ್ಥಗೌಡರವರು ನಿರಂಜನ್‌ರವರಿಗೆ ನಿಂಧಿಸಿದೆ. ಅವರೊಂದಿಗೆ ಮಾತನಾಡುತ್ತಿದ್ದವರನ್ನ ನಿಂಧಿಸಿ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೆ ತಮ್ಮ ಸಿಬ್ಬಂದಿಯ ಮೂಲಕ ನಿರಂಜನ್ ರಿಗೆ ಬೆದಿಕೆ ಹಾಕಿಸಿದ್ದಾರೆ. ಅವರನ್ನ ಸ್ಟೇಷನ್‌ಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಆ ಬಳಿಕ ಪೋಕ್ಸೋ ಕೇಸ್ ದಾಖಲಿಸಿ ಅಂದರ್ ಮಾಡುತ್ತೇನೆ ಎಂದು ಹೆದರಿಸಿದ್ದಾರೆ ಎಂದು ನಿರಂಜನ್ ವಿಡಿಯೋ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಈ ಘಟನೆ ಬೆನ್ನಲ್ಲೆ ತೀರ್ಥಹಳ್ಳಿಯ ಪತ್ರಕರ್ತರು ತೀರ್ಥಹಳ್ಳಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಇವತ್ತು ಶಿವಮೊಗ್ಗ ಜಿಲ್ಲೆ ಪತ್ರಕರ್ತರ ಬಳಗ ನಿರಂಜನ್‌ರವರ ಜೊತೆಗೆ ನಡೆದ ನಿಂದನೆ, ಬೆದರಿಕೆ ಹಾಗೂ ಹಲ್ಲೆ ಪ್ರಯತ್ನವನ್ನು ಖಂಡಿಸಿ ಪ್ರತಿಭಟನೆಗೆ ನಿರ್ಧರಿಸಿದೆ. ನಿರಂಜನ್‌ರವರಿಗೆ ನೈತಿಕ ಬೆಂಬಲವಾಗಿ ಮಲೆನಾಡು ಟುಡೆ ಬಳಗವೂ ನಿಂತಿದ್ದು, ಘಟನೆಯನ್ನು ಖಂಡಿಸುತ್ತದೆ..
ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ