SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 2, 2025
ಕೇರಳದ ಕಣ್ಣೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪಿದ್ದಾರೆ. ಹಾಗೆಯೇ ಬಸ್‌ನಲ್ಲಿದ್ದ 18 ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮೃತ ಮಗುವನ್ನು 5 ನೇ ತರಗತಿಯ ನೇದ್ಯ ಎಸ್ ರಾಜೇಶ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ 4:30ಕ್ಕೆ ಕೇರಳದ ಕುರುಮುತ್ತೂರಿನ ಚಿನ್ಮಯಿ ಶಾಲೆಯ ಬಸ್ ಪಲ್ಟಿಯಾಗಿದೆ. ಇದರಿಂದ ಬಸ್ ಮಂದಿನ ಸೀಟ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ನೇದ್ಯ ಎಸ್ ಬಸ್‌ನಿಂದ ಹೊರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇನ್ನಿತರ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
STORY | Student killed, 18 injured as school bus overturns in Kerala’s Kannur
READ: https://t.co/Nywqm53hQ6
VIDEO:
(Full video available on PTI Videos – https://t.co/n147TvrpG7) pic.twitter.com/haVqljIAR6
— Press Trust of India (@PTI_News) January 1, 2025
SUMMARY | In a tragic incident a school bus overturned in Kerala’s Kannur.
KEYWORDS | Kerala, school bus, accident,