ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಮರಿ ಹುಲಿ, ಯಕ್ಷ ಕುವರ, ವೆಂಕಟೇಶ್ವರ ! ಫೋಟೋ ಸ್ಟೋರಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 21, 2024

ಶಿವಮೊಗ್ಗ |  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ  ಇಂದು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕ ಎಸ್‌ಎನ್ ಚೆನ್ನಬಸಪ್ಪ ಉದ್ಘಾಟಿಸಿದರು.

ಈ ಪ್ರತಿಭಾ ಕಾರಂಜಿಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿ  ತಮ್ಮ ಕಲೆಯನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭೆಯನ್ನ ತೋರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್‌ಎನ್ ಚೆನ್ನಬಸಪ್ಪ ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದರು .

ನಮ್ಮದು ಸಾಂಸ್ಕೃತಿಕ ರಾಷ್ಟ್ರ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ. ವೈವಿಧ್ಯಮಯ ಸ್ಪರ್ಧೆಗಳು ಮತ್ತು ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ಪ್ರಯತ್ನ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. 

Shivamogga Malenadu Today

ಎಲ್ಲಾ ವಿದ್ಯಾರ್ಥಿಗಳು ಇಂತಹ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು| ಡಿ ಎಸ್‌ ಅರುಣ್ವಿಧಾನ ಪರಿಷತ್  ಸದಸ್ಯರಾದ ಡಿ.ಎಸ್.ಅರಣ್ ಮಾತನಾಡಿ, ನಮ್ಮದು ವೈವಿಧ್ಯಮಯ, ಸಾಂಸ್ಕೃತಿಕ ದೇಶ. ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಯುವ ಪೀಳಿಗೆಯು ಮಾಡಬೇಕು. ನಮ್ಮ ಸಂವಿಧಾನದಲ್ಲಿ ಹಕ್ಕಿನ ಜೊತೆ ಜವಾಬ್ದಾರಿಗಳೂ ಇದ್ದು ಅದನ್ನು ಅರಿತು ಮುಂದೆ ಸಾಗಬೇಕು. ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಮಕ್ಕಳಲ್ಲಿ ಸಾರ್ವಜನಿಕ ಶಿಷ್ಟಾಚಾರ ಮತ್ತು ಸಂಸ್ಕಾರ ಕಲಿಸುವುದು ನಮ್ಮ ಕರ್ತವ್ಯ. ಪ್ರತಿಭಾ ಕಾರಂಜಿ ಮೂಲಕ ಈ ಕೆಲಸ ಆಗುತ್ತಿದೆ ಎನ್ನಬಹುದು. ಎಲ್ಲ ಮಕ್ಕಳು ಇಂತಹ ವೇದಿಕೆ ಸದುಪಯೋಗ ಪಡೆದು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಹೆಸರು ಮಾಡಬೇಕೆಂದರು.‌

ಇತ್ತೀಚೆಗೆ ಶಾಲೆಗಳಲ್ಲಿ  ಪಠ್ಯೇತರ ಚಟುವಟಿಕೆಗಳು ಕಡಿಮೇ ಆಗಿದೆ| ಹೆಚ್‌ ಎಸ್ ಸುಂದರೇಶ್

ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಿಂದೆಲ್ಲ ಪಠ್ಯೇತರ ಚಟುವಟಿಕೆಗಳು ಹೆಚ್ಚಿತ್ತು. ಈಗ ಕಡಿಮೆ ಆಗುತ್ತಿದೆ. ಓದಿನ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆದರೆ ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕತೆ ಹಾಗೂ ಸ್ಪರ್ಧಾತ್ಮಕತೆಯನ್ನು ಕಲಿಸಬೇಕಿದೆ ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಶೇ.65 ರಿಂದ 70 ರಷ್ಟು ಸಾಧನೆ ಮಾಡಿದ್ದೇವೆ. ಮಕ್ಕಳಿಗೆ ನಮ್ಮ ನೆಲದ ಅಂದರೆ ಮಲೆನಾಡಿನ ಸಾಂಸ್ಕೃತಿಕ ವಿಚಾರದಲ್ಲಿ ತೊಡಗಿಸಬೇಕು ಎಂದ ಅವರು ಸರ್ಕಾರ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಶಿಕ್ಷಣದ ಜೊತೆಗೆ ಉಚಿತ ಊಟ, ಪುಸ್ತಕ, ಮೊಟ್ಟೆ ಇತರೆ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.

ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಿಮಿಕ್ರಿ, ಕ್ಲೇಮಾಡ್ಲಿಂಗ್, ಛದ್ಮವೇಷ, ಆಶುಭಾಷಣ, ಭರತನಾಟ್ಯ, ರಂಗೋಲಿ, ಚರ್ಚಾಸ್ಪರ್ಧೆ, ಕಥೆ ಹೇಳುವುದು, ಕವನ, ಪದ್ಯವಾಚನ, ಪ್ರಬಂಧ ರಚನೆ, ಜಾನಪದ ನೃತ್ಯಮ ಗಝಲ್, ಕವಾಲಿ, ಚಿತ್ರಕಲೆ, ಭಾವಗೀತೆ ಮುಂತಾದ 14 ವಿಭಾಗಕ್ಕೆ ಸೇರಿದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿಲಾಗಿತ್ತು.  

ಅರಕೆರೆಯ ಪ್ರಾಥಮಿಕ ಶಾಲೆಯ 4ನೇ ತರಗತಿ ಕಾರ್ತೀಕ್ ಹುಲಿ ವೇಷಧಾರಿಯಾಗಿ, ಹೊಳಲೂರು ಆಕ್ಸ್ಫರ್ಡ್ ಶಾಲೆಯ 3ನೇ ತರಗತಿ ಚೇತನ್ ಬಿ.ಕೆ ವೆಂಕಟೇಶ್ವರ ಸ್ವಾಮಿ, ಮಹಾವೀರ ಶಾಲೆಯ 4ನೇ ತರಗತಿ ಸುವ್ರತಾ ವಟುವಾಗಿ, ಆದಿಚುಂಚನಗಿರಿ ಶಾಲೆಯ 4ನೇತರಗತಿ ಸುದೀಕ್ಷ ಆಂಜನೇಯ ಹಾಗೂ ಪ್ಲಾಸ್ಟಿಕ್ ದುಷ್ಪರಿಣಾಮ ಸೇರಿದಂತೆ ವಿವಿಧ ಛದ್ಮವೇಶಧಾರಿಗಳು ಗಮನ ಸೆಳೆದರು. ಅದರ ಕೆಲವೊಂದು ಫೋಟೋ ತುಣುಕುಗಳು ಇಲ್ಲಿವೆ

 

Shivamogga Malenadu Today

Shivamogga Malenadu Today


Shivamogga Malenadu Today

Shivamogga Malenadu Today

SUMMARY|   A taluk-level talent fountain was organised at Kasturba Balika PU College today. Mla Chennabasappa inaugurated the programme.

KEYWORDS| Kasturba Balika PU College,Mla Chennabasapp, A taluk-level talent fountain, shivamogga,

Leave a Comment