SHIVAMOGGA | MALENADUTODAY NEWS | ಮಲೆನಾಡು ಟುಡೆ Dec 5, 2024
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಲೂ ದಿಢೀರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮರಣ ಹೊಂದಿದ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಮೆಗ್ಗಾನ್ ಆಸತ್ರೆಗೆ ಭೇಟಿ ನೀಡಿ, ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯ ಔಷಧ ಉಪ ಉಗ್ರಾಣ, ಮುಖ್ಯ ಉಗ್ರಾಣ ಮತ್ತು ಡಿಹೆಚ್‌ಒ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದರ. ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ಸರ್ಕಾರ ರದ್ದುಗೊಳಿಸಿದೆ. ಈ ಆದೇಶ ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಿದರು.
ಇವೆಲ್ಲದರ ನಡುವೆ ಪಶ್ಚಿಮ ಬಂಗಾಳದಿಂದ ಸರಬರಾಜು ಆಗುವ ಮೆಡಿಸಿನ್ ಗಳು ಸಹ ಬಳಕೆ ಮಾಡದಂತೆ ಲೋಕಾಯುಕ್ತ ಅಧಿಕಾರಿಗಳು, ಮೆಗ್ಗಾನ್ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
SUMMARY | Lokayukta officials made a surprise visit to The Meggan Hospital in Shivamogga. in the wake of the death of five pregnant women at a public hospital in Bellary
KEY WORDS |Lokayukta officials , The Meggan Hospital in Shivamogga , death of five pregnant women at a public hospital in Bellary