SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 14, 2024 | ಶಿವಮೊಗ್ಗದಲ್ಲಿ ನಾಡಿದ್ದು ಅಂದರೆ ಅಕ್ಟೋಬರ್ 16 ರಿಂದ ಮೂರು ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಮನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಬೆಂಗಳೂರು | ಬುಧವಾರದಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರ ದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬುಧವಾರದಿಂದ ಕರಾವಳಿ, ಒಳನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮನ್ಸೂಚನೆ ನೀಡಿದೆ
ಈ ಕಾರಣಕ್ಕಾಗಿ ಅಕ್ಟೋಬರ್ 16 ಮತ್ತು 17ಕ್ಕೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಇನ್ನೂ ಶಿವಮೊಗ್ಗಕ್ಕೆ ಅಕ್ಟೋಬರ್ 16 ಕ್ಕೆ ಯಲ್ಲೋ ಅಲರ್ಟ್ ನೀಡಲಾಗಿದೆ. ಅಕ್ಟೋಬರ್ 18 ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಚಾಮರಾಜನಗರ, ಕೊಡಗು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
SUMMARY | The India Meteorological Department (IMD) has predicted heavy to very heavy rainfall in Shivamogga, Hassan, Chamarajanagar, Kodagu, Kolar, Bengaluru Urban, Bengaluru Rural, Chikkaballapura, Ramanagara and Tumakuru districts. Orange alert, yellow alert in Shivamogga
KEYWORDS | India Meteorological Department, IMD , heavy to very heavy rainfall in Shivamogga, Hassan, Chamarajanagar, Kodagu, Kolar, Bengaluru Urban, Bengaluru Rural, Chikkaballapura, Ramanagara and Tumakuru districts, Orange alert, yellow alert in Shivamogga