SHIVAMOGGA | MALENADUTODAY NEWS | ಮಲೆನಾಡು ಟುಡೆ Dec 23, 2024
ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಂದೂವರೆ ಸಾವಿರ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎಎನ್‌ಎಂ) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (ಎಚ್‌ಐಒ) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಸಹಮತಿಯನ್ನು ಪಡೆಯಲಾಗಿದೆ. ಕೆಪಿಎಸ್‌ಸಿ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಗುತ್ತಿಗೆ ಹಾಗೂ ಖಾಯಂ ನೇಮಕಾತಿಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಸಂಬಂಧ ನಿಯಮಾವಳಿ ರೂಪಿಸಲಾಗಿದ್ದು . ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಅರ್ಜಿ ಆಹ್ವಾನಿಸಿದಾಗ ಸಂಭವನೀಯ ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ ಪಡೆಯಲು ಹಾಲಿ ಅರ್ಹತೆಗಳನ್ನು ಪರಿಷ್ಕರಿಸ ಬೇಕು. ಇದು ತ್ವರಿತವಾಗಿ ನಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಯುಕ್ತರು ಸೇರಿ ದಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗಿದೆ.
SUMMARY |Recruitment for 1205 Primary Health Nurse (ANM) and 300 Health Inspector posts in the Department of Health and Family Welfare
KEY WORDS | Primary Health Nurse Recruitment, ANM Recruitment , Health Inspector posts Health and Family Welfare Recruitment