SHIVAMOGGA | MALENADUTODAY NEWS | ಮಲೆನಾಡು ಟುಡೆ Oct 18, 2024
ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ 11 ನೇ ಸೀಸನ್ ಗೆ ಮತ್ತೊಂದು ಕೋರ್ಟ್ ನೋಟಿಸ್ ಜಾರಿಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ನ್ಯಾಯಾಲಯದಿಂದ ತುರ್ತು ನೋಟಿಸ್ ಜಾರಿಯಾಗಿದೆ.
ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿದ್ದು ತನ್ನದೆ ವಿಷಯಗಳ ಸುತ್ತ ದಿನದ ಎಪಿಸೋಡ್ ಗಳು ಹೊರಬರುತ್ತಿವೆ. ಈ ನಡುವೆ ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಅಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಾನ್ಯ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ.
ಇನ್ನೂ ಈ ಸಂಬಂಧ ನ್ಯಾಯಾಧೀಶರಾದ ಚಾಂದಿನಿ ಜಿ.ಯು ರವರು ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡಿದ್ದು, ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U/sec.26,order7,rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಅಲ್ಲದೆ ಈ ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.

SUMMARY | Another court notice has been issued for the 11th season of Bigg Boss Kannada on Colors Kannada. An urgent notice has been issued by the Sagar court in Shivamogga district.
KEYWORDS | Another court noticei ssued for the Bigg Boss Kannada, big boss season 11, Colors Kannada , Sagar court in Shivamogga district